2026-06-08 04:06:36

mojtaba khameni elected as leader of iran Speed News Kannada

mojtaba khameni elected as leader of iran  Speed News Kannada

ಟೆಹರಾನ್‌: ಇರಾನ್‌ ದೇಶದ ನೂತನ ಪರಮೋಚ್ಚ ನಾಯಕರನ್ನಾಗಿ ಆಯತೊಲ್ಲಾ ಅಲಿ ಖಮೇನಿ ಅವರ ಪುತ್ರ ಮೊಜ್ವಾಬಾ ಖಮೇನಿ ಅವರನ್ನು ಆಯ್ಕೆ ಮಾಡಲಾಗಿದೆ.
ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಹತರಾದ ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ಉತ್ತರಾಧಿಕಾರಿಯನ್ನಾಗಿ 57 ವರ್ಷದ ಮೊಜ್ಜಾಬಾ ಖಮೇನಿ ಅವರನ್ನು 88 ಸದಸ್ಯರ ತಜ್ಞರ ಮಂಡಳಿ ಆಯ್ಕೆ ಮಾಡಿದೆ ಎಂದು ಸ್ಥಳೀಯ ಮಾದ್ಯಮಗಳು ವರದಿ ಮಾಡಿವೆ.
ಆಯ್ಕೆ ಮಂಡಳಿಯ ಸದಸ್ಯರಲ್ಲೊಬ್ಬರಾದ ಅಹ್ಮದ್ ಅಲಮುಲ್‌ ಹುದಾ ಪ್ರತಿಕ್ರಿಯೆ ನೀಡಿದ್ದು, ಇರಾನ್‌ನ ಹೊಸ ಪರಮೋಚ್ಚ ನಾಯಕನ ಆಯ್ಕೆಗೆ ಮತದಾನ ನಡೆದಿದ್ದು, ಮೊಜ್ವಾಬಾ ಖಮೇನಿ ಅವರನ್ನು ಆಯ್ಕೆ ಮಾಡಲಾಗಿದೆ' ಎಂದು ಹೇಳಿದ್ದಾರೆ.
ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್, ಇರಾನ್ ನಲ್ಲಿ ಯಾರನ್ನೇ ಪರಮೋಚ್ಚ ನಾಯಕರನ್ನಾಗಿ ಆಯ್ಕೆ ಮಾಡಿದರೂ  ಅವರನ್ನು ಹುಡಕಿ ಹೊಡೆಯುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಹೊಸ ನಾಯಕನ ಆಯ್ಕೆಗೆ ಅಮೆರಿಕದ ಒಪ್ಪಿಗೆ ಪಡೆಯಬೇಕು ಎಂದೂ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.