2026-06-08 01:33:14

ಅಕ್ರಮ ಹಣ ವರ್ಗಾವಣೆ: ಕೇರಳಂ ಮಾಜಿ ಸಿಎಂ ಪಿಣರಾಯಿ ವಿಜಯನ್‌ ಮನೆ ಮೇಲೆ ಇ.ಡಿ ದಾಳಿ| Speed News Kannada

ಅಕ್ರಮ ಹಣ ವರ್ಗಾವಣೆ: ಕೇರಳಂ ಮಾಜಿ ಸಿಎಂ ಪಿಣರಾಯಿ ವಿಜಯನ್‌ ಮನೆ ಮೇಲೆ ಇ.ಡಿ ದಾಳಿ| Speed News Kannada

ತಿರುವನಂತಪುರ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಇಂದು ಮುಂಜಾನೆ ಕೇರಳಂ ರಾಜ್ಯದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಾವರ ಆಪ್ತರ ನಿವಾಸಗಳ ಮೇಲೆ ದಾಳಿ ನಡೆಸಿದೆ.

ತಿರುವನಂತಪುರದಲ್ಲಿರುವ ಪಿಣರಾಯಿ ಅವರ ಬಾಡಿಗೆ ಮನೆ ಸೇರಿದಂತೆ ರಾಜ್ಯದ ಒಟ್ಟು 10 ಸ್ಥಳಗಳ ಮೇಲೆ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಸೆಕ್ಷನ್‌ ಅಡಿಯಲ್ಲಿ ದಾಳಿ ನಡೆಸಲಾಗುತ್ತಿದೆ ಎಂದು ಇಡಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ವಿವಾದಿತ ಗಣಿ ಕಂಪನಿ ಕೊಚ್ಚಿನ್‌ ಮಿನರಲ್ಸ್‌ ಮತ್ತು ರೂಟೈಲ್ಸ್‌ ಲಿಮಿಟೆಡ್‌ (ಸಿಎಂಆರ್‌ಎಲ್‌) ಹಾಗೂ ಪಿಣರಾಯಿ ಅವರ ಪುತ್ರಿ ವೀಣಾ ಟಿ. ಅವರ ಒಡೆತನದ ಬೆಂಗಳೂರು ಮೂಲದ ಐಟಿ ಸಂಸ್ಥೆ ಎಕ್ಸ್‌ಲಾಜಿಕ್‌ ಸಲ್ಯೂಷನ್‌ ನಡುವೆ ನಡೆದಿದೆ ಎನ್ನಲಾದ ರೂ.1.72 ಕೋಟಿ ಪಾವತಿ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ದಾಳಿ ನಡೆದಿದೆ.

ವೀಣಾ ಅವರ ಸಂಸ್ಥೆಯ ಮೂಲಕ ಆ ಹ‌ಣ ಪಿಣರಾಯಿ ಅವರನ್ನು ತಲುಪಿದೆ ಎಂದು ಪತ್ರಕರ್ತರೊಬ್ಬರು ಆರೋಪಿಸಿ ತನಿಖೆ ನಡೆಸುವಂತೆ ನ್ಯಾಯಾಲಯದ ಮೆಟ್ಟಿಲೇರಿದ್ದರು.  ಈ ಪ್ರಕರಣದಲ್ಲಿ ಇ.ಡಿ ಕೈಗೊಂಡಿರುವ ಕ್ರಮಗಳನ್ನು ರದ್ದುಗೊಳಿಸುವಂತೆ ಕೋರಿ ಸಿಎಂಆರ್‌ಎಲ್ ಸಲ್ಲಿಸಿದ್ದ ಅರ್ಜಿಯನ್ನು ಕೇರಳಂ ಹೈಕೋರ್ಟ್ ನಿನ್ನೆಯಷ್ಟೇ ವಜಾಗೊಳಿಸಿತ್ತು.

 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.