2026-05-02 11:48:28

Monsoon to arrive in Andaman between May 14-16|ಮೇ 14–16ರೊಳಗೆ ಅಂಡಮಾನ್‌ಗೆ ಮಾನ್ಸೂನ್ ಪ್ರವೇಶ|Speed News Kannada

Monsoon to arrive in Andaman between May 14-16|ಮೇ 14–16ರೊಳಗೆ ಅಂಡಮಾನ್‌ಗೆ ಮಾನ್ಸೂನ್ ಪ್ರವೇಶ|Speed News Kannada

ಭಾರತೀಯ ಹವಾಮಾನ ಇಲಾಖೆ ನೀಡಿರುವ ಹೊಸ ಮುನ್ಸೂಚನೆಯ ಪ್ರಕಾರ, ನೈಋತ್ಯ ಮಾನ್ಸೂನ್ ಮೇ 14 ರಿಂದ 16ರ ನಡುವೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳನ್ನು ತಲುಪುವ ಸಾಧ್ಯತೆ ಇದೆ.ಮೇ ತಿಂಗಳಲ್ಲಿ ದೇಶಾದ್ಯಂತ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಇದರಿಂದ ದೇಶದಲ್ಲಿ ಇತ್ತೀಚೆಗೆ ಕಾಣಿಸಿಕೊಂಡಿರುವ ಉರಿಬಿಸಿಲು ಪರಿಸ್ಥಿತಿಗೆ ಭಾಗಶಃ ಪರಿಹಾರ ಸಿಗುವ ನಿರೀಕ್ಷೆಯಿದೆ.

ಆದರೆ, ಕೆಲವು ಪ್ರದೇಶಗಳಲ್ಲಿ ಶಾಖದ ಅಲೆ ಮುಂದುವರಿಯುವ ಸಾಧ್ಯತೆಯೂ ಇದೆ. ಹಿಮಾಲಯದ ತಪ್ಪಲಿನ ಭಾಗಗಳು, ಪೂರ್ವ ಕರಾವಳಿ ರಾಜ್ಯಗಳು, ಗುಜರಾತ್ ಮತ್ತು ಮಹಾರಾಷ್ಟ್ರಗಳಲ್ಲಿ ಹೀಟ್‌ವೇವ್ ದಿನಗಳು ಹೆಚ್ಚಾಗಬಹುದು ಎಂದು ಎಚ್ಚರಿಕೆ ನೀಡಲಾಗಿದೆ.ಮತ್ತೊಂದು ಕಡೆ, ಪೂರ್ವ, ಈಶಾನ್ಯ ಮತ್ತು ಪೂರ್ವ ಮಧ್ಯ ಭಾರತದ ಕೆಲವು ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ.

IMD ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ಅವರ ಪ್ರಕಾರ, ದೇಶದ ಹಲವು ಭಾಗಗಳಲ್ಲಿ ಕನಿಷ್ಠ ತಾಪಮಾನವೂ ಸಾಮಾನ್ಯಕ್ಕಿಂತ ಹೆಚ್ಚಾಗಿರಲಿದೆ.ಹವಾಮಾನ ಇಲಾಖೆಯು ಎಲ್ ನಿನೋ ಪರಿಸ್ಥಿತಿಯತ್ತ ಸಾಗುತ್ತಿರುವ ಸೂಚನೆಗಳನ್ನೂ ಗಮನಿಸುತ್ತಿದೆ ಎಂದು ತಿಳಿಸಿದೆ

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.