2026-07-19 04:35:18

Moodabidri | ಮೂಡಬಿದಿರೆ ಮನೆಯಲ್ಲಿ ನೇಣು ಬಿಗಿದು ವಿವಾಹಿತ ಮಹಿಳೆ ಆತ್ಮಹತ್ಯೆ | SNK

Moodabidri | ಮೂಡಬಿದಿರೆ ಮನೆಯಲ್ಲಿ ನೇಣು ಬಿಗಿದು ವಿವಾಹಿತ ಮಹಿಳೆ ಆತ್ಮಹತ್ಯೆ | SNK

ಮೂಡಬಿದಿರೆ: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ನಿನ್ನೆ(ಜು.17) ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಅರ್ಚಕ ಗುರು ಭಟ್ ಅವರ ಪತ್ನಿ ಸ್ನೇಹಾ ಎಂದು ಗುರುತಿಸಲಾಗಿದೆ.

ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರಿಗೆ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ ಎಂದು ತಿಳಿದುಬಂದಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.