2026-06-25 02:05:53

Mother dies after saving her child | ನೀರಿನಲ್ಲಿ ಮುಳುಗುತ್ತಿದ್ದ ಮಗುವಿನ ರಕ್ಷಣೆ ತಾಯಿ ಸಾವು | Speed News Kannada

Mother dies after saving her child | ನೀರಿನಲ್ಲಿ ಮುಳುಗುತ್ತಿದ್ದ ಮಗುವಿನ ರಕ್ಷಣೆ ತಾಯಿ ಸಾವು | Speed News Kannada

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ನೀರಿನಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋದ ತಾಯಿ ಸಾವನ್ನಪ್ಪಿರುವ ದಾರುಣ ಘಟನೆ ಚಿಂತಾಮಣಿ ತಾಲೂಕಿನ ಮುರಗಮಲ್ಲ ಕೆರೆಯಲ್ಲಿ ನಡೆದಿದೆ. ಬೆಂಗಳೂರಿನ ಬನಶಂಕರಿ ಮೂಲದ ತಬುಸುಮ್ ಖಾನ್ (24) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.
ಮುರುಗಮಲ್ಲಾದ ದರ್ಗಾಗೆ ಬಂದಿದ್ದ ಕುಟುಂಬಸ್ಥರು ಕೆರೆ ಬಳಿ ನೀರಿನಲ್ಲಿ ಆಟವಾಡುತ್ತಿದ್ದರು ಎನ್ನಲಾಗಿದೆ. ತಾಯಿ ಬಟ್ಟೆಯನ್ನು ತರಲು ಹೋದಾಗ ಮಕ್ಕಳು ಕೆರೆಗೆ ಹೋಗಿದ್ದು ಮುಳುಗಿದ್ದಾರೆ. ಇದನ್ನ ಕಂಡ ತಾಯಿ ಕೂಡಲೇ ಕೆರೆಗೆ ದುಮುಕಿದ್ದಾರೆ. ಈಜು ಬರದ ಕಾರಣ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಅದೃಷ್ಟವಶಾತ್ ಅಲ್ಲೇ ಇದ್ದ ತಂದೆ ಹಾಗೂ ಸಂಬಂಧಿ ಯುವಕರು ಮಕ್ಕಳನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಮಕ್ಕಳನ್ನ ರಕ್ಷಣೆ ಮಾಡಿದರೂ ಪತ್ನಿಯನ್ನು ಉಳಿಸಿಕೊಳ್ಳಲು ಆಗಲಿಲ್ಲ ಎಂದು ಗಂಡ ಕಣ್ಣೀರಿಟ್ಟಿದ್ದಾನೆ

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.