2026-06-25 02:23:47

Mother, son die after Swift car falls into canal|ನಾಲೆಗೆ ಬಿದ್ದ ಸ್ವಿಫ್ಟ್ ಕಾರು ತಾಯಿ, ಮಗ ದುರ್ಮರಣ|Speed News Kannada

Mother, son die after Swift car falls into canal|ನಾಲೆಗೆ ಬಿದ್ದ ಸ್ವಿಫ್ಟ್ ಕಾರು ತಾಯಿ, ಮಗ ದುರ್ಮರಣ|Speed News Kannada

ಚನ್ನರಾಯಪಟ್ಟಣ ತಾಲ್ಲೂಕಿನ ಮಲ್ಲನಘಟ್ಟ ಗ್ರಾಮದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಮತ್ತು ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರಿನ ದೇವನಹಳ್ಳಿಯ ನಿವಾಸಿಗಳಾದ ಮಂಜುನಾಥ್ ಅವರ ಕುಟುಂಬವು ಧರ್ಮಸ್ಥಳಕ್ಕೆ ಪ್ರವಾಸ ಹೋಗಿ ವಾಪಾಸ್ ಆಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

KA-02-MT-2690 ನಂಬರ್‌ನ ಕಾರು ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನಾಲೆಗೆ ಬಿದ್ದಿದೆ. ಈ ದುರ್ಘಟನೆಯಲ್ಲಿ ಪ್ರಿಯಾಂಕ (30) ಮತ್ತು ಅವರ ಒಂದೂವರೆ ವರ್ಷದ ಮಗ ವೈಭವ್ ಪ್ರಾಣ ಕಳೆದುಕೊಂಡಿದ್ದಾರೆ. ಕಾರಿನಲ್ಲಿದ್ದ ಮಂಜುನಾಥ್, ಚಂದನ್, ದಿಲೀಪ್ ಮತ್ತು ದೇವರಾಜು ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಚನ್ನರಾಯಪಟ್ಟಣದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಚನ್ನರಾಯಪಟ್ಟಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.