2026-03-07 04:59:49

MP Tejaswi Surya and US Ambassador travel in an auto | ಬೆಂಗಳೂರಿನಲ್ಲಿ ತಡರಾತ್ರಿ ಆಟೋದಲ್ಲಿ ಸಂಸದ ತೇಜಸ್ವಿ ಸೂರ್ಯ ಅಮೆರಿಕ ರಾಯಭಾರಿ ಸಂಚಾರ | Speed News Kannada

MP Tejaswi Surya and US Ambassador travel in an auto | ಬೆಂಗಳೂರಿನಲ್ಲಿ ತಡರಾತ್ರಿ ಆಟೋದಲ್ಲಿ ಸಂಸದ ತೇಜಸ್ವಿ ಸೂರ್ಯ ಅಮೆರಿಕ ರಾಯಭಾರಿ ಸಂಚಾರ | Speed News Kannada

ಬೆಂಗಳೂರು: ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಭಾರತದ ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್ ಅವರನ್ನು ನಿನ್ನೆ ತಡರಾತ್ರಿ ಆಟೋದಲ್ಲಿ ಸಂಚರಿಸಿ ಮಾಡಿ ಬೆಂಗಳೂರು ಸುತ್ತಿಸಿದ್ದಾರೆ.
ತೇಜಸ್ವಿ ಸೂರ್ಯ ಅವರು ಸಾಮಾಜಿಕ ಜಾಲತಾಣಗಳಲ್ಲಿ ಈ ಮಾಹಿತಿ ಹಂಚಿಕೊಂಡಿದ್ದಾರೆ. ಆಟೋದಲ್ಲಿ ಪ್ರಯಾಣಿಸುತ್ತಿರುವಾಗ ಗೋರ್ ತಮ್ಮ ಫೋನ್‌ನಲ್ಲಿ ರಸ್ತೆಗಳನ್ನು ರೆಕಾರ್ಡ್ ಮಾಡುತ್ತಿರುವ ದೃಶ್ಯ ಕೂಡ ವಿಡಿಯೋದಲ್ಲಿ ಸೆರೆಯಾಗಿದೆ.
ನಂತರ ಇನ್ನರೂ ವರಿಷ್ಠರು ಹೊಟೆಲ್ ಒಂದರಲ್ಲಿ ಮಸಾಲೆ ದೋಸೆ ಮತ್ತು ಸ್ಟ್ರಾಂಗ್ ಫಿಲ್ಟರ್ ಕಾಫಿ ಸೇವಿಸಿದ್ದಾರೆ. ಈ ವೇಳೆ ಮಾತನಾಡುವಾಗ ಇಬ್ಬರೂ ಭಾರತ-ಅಮೆರಿಕ ಪಾಲುದಾರಿಕೆಯ ಬಗ್ಗೆ ಮಾತನಾಡಿದ್ದಾರೆ.
ಉಭಯ ದೇಶಗಳ ನಡುವೆ ಇತ್ತೀಚೆಗೆ ಮಾಡಿಕೊಳ್ಳಲಾದ ಮಧ್ಯಂತರ ವ್ಯಾಪಾರ ಒಪ್ಪಂದದ ಹಿನ್ನೆಲೆಯಲ್ಲಿ, ವ್ಯಾಪಾರ, ತಂತ್ರಜ್ಞಾನ ಮತ್ತು ನಾವೀನ್ಯತೆಗಳ ಮೇಲೆ ನಮ್ಮ ಚರ್ಚೆ ಕೇಂದ್ರೀಕೃತವಾಗಿತ್ತು ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.
ಗೋರ್ ಅವರೂ ಸಹ ಬೆಂಗಳೂರು ನಗರವನ್ನು ಅದ್ಭುತ ನಗರ ಎಂದು ಬಣ್ಣಿಸಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.