2026-03-07 05:11:56

MP Tejaswi Surya Arrested For Protesting with Empty Trunk | ಖಾಲಿ ಟ್ರಂಕ್ ಹಿಡಿದು ಪ್ರತಿಭಟನೆಗೆ ಮುಂದಾದ ಸಂಸದ ತೇಜಸ್ವಿ ಸೂರ್ಯ ಬಂಧನ | Speed News Kannada

MP Tejaswi Surya Arrested For Protesting with Empty Trunk | ಖಾಲಿ ಟ್ರಂಕ್ ಹಿಡಿದು ಪ್ರತಿಭಟನೆಗೆ ಮುಂದಾದ ಸಂಸದ ತೇಜಸ್ವಿ ಸೂರ್ಯ ಬಂಧನ | Speed News Kannada

ಬೆಂಗಳೂರು: ನಮ್ಮ ಮೆಟ್ರೋ ದರ ಏರಿಕೆ ವಿರೋಧಿಸಿ ಖಾಲಿ ಟ್ರಂಕ್ ಪ್ರತಿಭಟನೆ ಹಮ್ಮಿಕೊಂಡಿದ್ದ ಬಿಜೆಪಿ ಮುಖಂಡ, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರನ್ನು ಪೊಲೀಸರು ಬಂದಿಸಿದ್ದಾರೆ.  ಆರ್ ವಿ ರಸ್ತೆ ಮೆಟ್ರೋ ನಿಲ್ದಾಣದಲ್ಲಿ ಅನುಮತಿ ಪಡೆಯದೆ ಖಾಲಿ ಟ್ರಂಕ್‌ ಹಿಡಿದು ಪ್ರತಿಭಟನೆಗೆ ಮುಂದಾದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದರು. 
ಕೇಂದ್ರ ಸರ್ಕಾರದ ಒತ್ತಡದ ಪರಿಣಾಮ ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ಬ್ರೇಕ್‌ ಹಾಕಿದೆ. ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಸಿರ ಇಲ್ಲ. ಆದ್ದರಿಂದ ರಾಜ್ಯ ಸರ್ಕಾರ ಕೂಡಲೇ ರಾಜ್ಯದ ಆರ್ಥಿಕ ಪರಿಸ್ಥಿತಿ ಕುರಿತು ಶ್ವೇತಪತ್ರ ಹೊರಡಿಸಬೇಕು ಎಂದು ಆಗ್ರಹಪಡಿಸಿದರು. 
ಉತ್ತಮ ಸಾರಿಗೆ, ರಸ್ತೆ, ಮೊದಲಾದ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ರಾಜ್ಯ ಸರ್ಕಾರದ ಜವಬ್ದಾರಿ. ಇಷ್ಟಕ್ಕೂ ನಾವು ಕೈಗೆಟಕುವ ಸಾರ್ವಜನಿಕ ಸಾರಿಗೆ ಸೌಲಭ್ಯವನ್ನು ಮಾತ್ರ ಕೇಳುತ್ತಿದ್ದೇವೆ. ಆದರೆ ಸರ್ಕಾರ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದಕ್ಕೆ ಬದಲಾಗಿ ಬಂಧನದಂತಹ ಕ್ರಮಕ್ಕೆ ಮುಂದಾಗಿರುವುದು ನಾಚಿಕೆಗೇಡಿನ ಸಂಗತಿ ಎಂದು ಟೀಕಿಸಿದರು. 
ಬಂಧನಕ್ಕೂ ಮುನ್ನ ಅವರು, ಖಾಲಿ ಟ್ರಂಕ್ ಜೊತೆಗೆ ಮೆಟ್ರೋ ನಿಲ್ದಾಣಕ್ಕೆ ಆಗಮಿಸಿದರು.  ಖಾಲಿ ಟ್ರಂಕ್ ತೋರಿಸಿ ರಾಜ್ಯ ಸರಕಾರದ ಖಜಾನೆ ಖಾಲಿಯಾಗಿದೆ ಎಂದು ವ್ಯಂಗ್ಯವಾಡಿದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.