2026-04-24 04:05:09

Murder case of a man who demanded a share in property | Three sentenced to life imprisonment |ಆಸ್ತಿಯಲ್ಲಿ ಪಾಲು ಕೇಳಿದ ವ್ಯಕ್ತಿಯ ಕೊಲೆ ಕೇಸ್‌ |ಮೂವರಿಗೆ ಜೀವಾವಧಿ ಶಿಕ್ಷೆ|Speed News Kannada

Murder case of a man who demanded a share in property | Three sentenced to life imprisonment |ಆಸ್ತಿಯಲ್ಲಿ ಪಾಲು ಕೇಳಿದ ವ್ಯಕ್ತಿಯ ಕೊಲೆ ಕೇಸ್‌ |ಮೂವರಿಗೆ ಜೀವಾವಧಿ ಶಿಕ್ಷೆ|Speed News Kannada

ಆಸ್ತಿಯಲ್ಲಿ ಪಾಲು ಕೇಳಿದ ವ್ಯಕ್ತಿಯ ಕೊಲೆ ಮಾಡಿದ್ದ ಮೂವರು ಆರೋಪಿಗಳಿಗೆ ಶಿರಸಿಯ 1 ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಪ್ರಕಟಿಸಿದೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಬಿದ್ರಳ್ಳಿಯ ಕೇಶವ ಪಾಂಡುರಂಗ ಕಿತ್ತೂರಕರ್ ಆಸ್ತಿಯಲ್ಲಿ ತನ್ನ ಪಾಲನ್ನು ಕೇಳಿದ್ದ. ಅದನ್ನು ತಪ್ಪಿಸುವ ಉದ್ದೇಶದಿಂದ ಅಕ್ಷಯ ಯಾನೆ ಆಕಾಶ ಪಾಂಡುರಂಗ ಕಿತ್ತೂರಕರ್, ಪಾಂಡುರಂಗ ಕೀರಪ್ಪ ಕಿತ್ತೂರಕರ್ ಹಾಗೂ ಲತಾ ತುಳಸಾಯಿ ಕೋಂ ಪಾಂಡುರಂಗ ಕಿತ್ತೂರಕರ್ ಸೇರಿದಂತೆ 5 ಜನ ಈತನನ್ನು ಕೊಲೆಗೈದಿದ್ದರು. ಈ ಕುರಿತಂತೆ ಅಂದಿನ ತನಿಖಾಧಿಕಾರಿ ಹಳಿಯಾಳದ ಪೊಲೀಸ್ ನಿರೀಕ್ಷಕ ಬಿ.ಎಸ್.ಲೋಕಾಪುರ 2019ರ ಅಕ್ಟೋಬರ್‌ 15 ರಂದು ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿಯನ್ನು ಸಲ್ಲಿಸಿದ್ದರು

ಕೊಲೆ ಪ್ರಕರಣವನ್ನು ಕೈಗೆತ್ತಿಕೊಂಡ ನಗರದ 1 ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಾರವಾರ ಪೀಠದ ಯಲ್ಲಾಪುರ ಪೀಠಾಸಿನ ನ್ಯಾಯಾಧೀಶರಾದ ಕಿರಣ ಕಿಣಿ, ಆರೋಪಿಗಳ ವಿಚಾರಣೆ ನಡೆಸಿ ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ರಾಜೇಶ ಮಳಗಿಕರ್ ವಾದವನ್ನು ಮಂಡಿಸಿ ನ್ಯಾಯ ಒದಗಿಸುವಲ್ಲಿ ಯಶಸ್ವಿಯಾಗಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.