2026-06-08 01:25:56

Mysore calf dies due to doctor negligence | ವೈದ್ಯರ ನಿರ್ಲಕ್ಷ್ಯಕ್ಕೆ ಮೈಸೂರಿನ ಹಸುಗೂಸು ಸಾವು | Speed news kannada

Mysore calf dies due to doctor negligence | ವೈದ್ಯರ ನಿರ್ಲಕ್ಷ್ಯಕ್ಕೆ ಮೈಸೂರಿನ ಹಸುಗೂಸು ಸಾವು | Speed news kannada

ವೈದ್ಯರ ನಿರ್ಲಕ್ಷ್ಯಕ್ಕೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿ ಡಿಸ್ಚಾರ್ಜ್​​ ಆಗಿದ್ದ ರೋಗಿಯೋರ್ವ ನರಳಿ ನರಳಿ ಪ್ರಾಣಬಿಟ್ಟಿರುವ ಆರೋಪ ನಿನ್ನೆಯಷ್ಟೇ ಕೇಳಿಬಂದಿತ್ತು. ಅದೇ ರೀತಿಯ ಮತ್ತೊಂದು ಘಟನೆ ಇದೀಗ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನವಜಾತ ಶಿಶುವೊಂದು ಇರುವೆ ಕಚ್ಚಿ ಮೃತಪಟ್ಟಿರುವ ಬಗ್ಗೆ ಮೈಸೂರಿನಲ್ಲಿ  ದೂರು ಕೇಳಿಬಂದಿದೆ. ಚೆಲುವಾಂಬ ಆಸ್ಪತ್ರೆ ವಿರುದ್ಧ ಮೃತ ಮಗುವಿನ ಪೋಷಕರು ದೂರಿದ್ದು, ವೈದ್ಯರು ಮತ್ತು ಸಿಬ್ಬಂದಿಯ ನಿರ್ಲಕ್ಷ್ಯವೇ ಹಸುಳೆಯ ಸಾವಿಗೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಏಪ್ರಿಲ್ 15ರಂದು ಅವಧಿ ಪೂರ್ವ ಗಂಡು ಮಗುವಿನ ಜನನವಾಗಿತ್ತು. ಕೇವಲ 7 ತಿಂಗಳಿಗೆ ಹುಟ್ಟಿದ್ದ ಮಗು 1 ಕೆಜಿ 40 ಗ್ರಾಂ ಮಾತ್ರ ತೂಕ ಹೊಂದಿತ್ತು. ಈ ಹಿನ್ನೆಲೆ ಚೆಲುವಾಂಬ ಆಸ್ಪತ್ರೆಯ ಐಸಿಯುನಲ್ಲಿ ಶಿಶುವಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಈ ವೇಳೆ ಮಗುವಿಗೆ ಇರುವೆ ಕಚ್ಚಿರುವ ಆರೋಪ ಕೇಳಿಬಂದಿದೆ. ತುಂಬಾ ಇರುವೆಗಳಿದ್ದ ಬಗ್ಗೆ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗೆ ಈ ಮೊದಲೇ ತಿಳಿಸಿದ್ದೆವು. ಆದರೆ ಸಿಹಿ ಕಾರಣಕ್ಕೆ ಒಂದೆರಡು ಇರುವೆಗಳು ಬಂದಿವೆ ಎಂಬ ಸಮಜಾಯಿಷಿಯನ್ನು ಅವರು ನೀಡಿದ್ದರು. ಈಗ ನೋಡಿದರೆ ಮಗುವೇ ತೀರಿಕೊಂಡಿದೆ ಎಂದು ಪೋಷಕರು ಅಲವತ್ತುಕೊಂಡಿದ್ದಾರೆ. ಅಲ್ಲದೆ, ನಮಗೆ ನ್ಯಾಯ ಬೇಕು ಎಂದು ಆಗ್ರಹಿಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.