2026-05-02 10:46:48

Mysterious death of a young woman in Adugodi, Bengaluru|ಬೆಂಗಳೂರಿನ ಆಡುಗೋಡಿಯಲ್ಲಿ ಯುವತಿ ನಿಗೂಢ ಸಾವು|Speed News Kannada

Mysterious death of a young woman in Adugodi, Bengaluru|ಬೆಂಗಳೂರಿನ ಆಡುಗೋಡಿಯಲ್ಲಿ ಯುವತಿ ನಿಗೂಢ ಸಾವು|Speed News Kannada

ಬೆಂಗಳೂರಿನ ಆಡುಗೋಡಿಯಲ್ಲಿ ನಡೆದ ಯುವತಿ ಪೂಜಾ ದತ್ತಾ ನಿಗೂಢ ಸಾವು ಇದೀಗ ನಗರದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಕಳೆದ ಮೂರು ದಿನಗಳಿಂದ ಬಾಗಿಲು ಹಾಕಿದ್ದ ಮನೆಯಿಂದ ದುರ್ನಾತ ಬೀಸುತ್ತಿದ್ದಾಗ, ಮನೆ ಮಾಲೀಕರು ಬಾಗಿಲು ಒಡೆದು ನೋಡಿದಾಗ ಪೂಜಾ ನಗ್ನ ಸ್ಥಿತಿಯಲ್ಲಿ ಅರೆಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಈ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ, ಘಟನಾ ಸ್ಥಳದ ದೃಶ್ಯಗಳು ದಂಗುಬಡಿಸಿವೆ. ಪೂಜಾ ವಾಸವಿದ್ದ ಮನೆಯ ಗೋಡೆಗಳ ತುಂಬೆಲ್ಲಾ ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿ ಬರೆದ ಚೀಟಿಗಳನ್ನು ಅಂಟಿಸಲಾಗಿದ್ದು, ಚಿತ್ರಗಳನ್ನು ಬಿಡಿಸಲಾಗಿದೆ. ಅಷ್ಟೇ ಅಲ್ಲದೆ, ಮನೆ ಪೂರ್ತಿ ಐದಾರು ಮೂಟೆಯಷ್ಟು ಹಳೆಯ ಕಾಗದಗಳು ಮತ್ತು ಕಸದ ರಾಶಿ ಬಿದ್ದಿದ್ದು, ಆಕೆ ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳೇ ಎಂಬ ಅನುಮಾನ ಬಲವಾಗಿದೆ.

ಸ್ಥಳೀಯರ ಮಾಹಿತಿ ಪ್ರಕಾರ, ಪೂಜಾ ಆಗಾಗ ರಸ್ತೆಯಲ್ಲಿ ಒಬ್ಬಳೇ ಮಾತನಾಡಿಕೊಳ್ಳುತ್ತಾ ಸಂಚರಿಸುತ್ತಿದ್ದಳು. ಇನ್ನು ಆಕೆಯ ಮನೆಗೆ ನಿಗೂಢ ಯುವಕನೊಬ್ಬ ಆಗಮಿಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದ್ದು, ಸದ್ಯ ಆಕೆಯ ಮೊಬೈಲ್ ಸ್ವಿಚ್ ಆಫ್ ಆಗಿದೆ. ಪೊಲೀಸರು ಸಿಡಿಆರ್ ಪರಿಶೀಲನೆ ನಡೆಸುತ್ತಿದ್ದು, ಸಾವಿನ ಹಿಂದಿನ ಸತ್ಯಾಂಶ ಶೀಘ್ರದಲ್ಲೇ ಹೊರಬರಬೇಕಿದೆ.

 

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.