2026-03-07 06:07:08

N Ravikumar | ಡಿ ಕೆ ಶಿ ಅವರ ಮೈ ಬ್ರದರ್ಸ್ ಪಾಲಿಸಿಯಿಂದ ಗಲಭೆಗಳು ಹೆಚ್ಚುತ್ತಿವೆ ಎನ್ ರವಿಕುಮಾರ್ | Speed News Kannada

N Ravikumar | ಡಿ ಕೆ ಶಿ ಅವರ ಮೈ ಬ್ರದರ್ಸ್ ಪಾಲಿಸಿಯಿಂದ ಗಲಭೆಗಳು ಹೆಚ್ಚುತ್ತಿವೆ ಎನ್ ರವಿಕುಮಾರ್ | Speed News Kannada

ಬೆಂಗಳೂರು: ಸರಕಾರಿ ನೌಕರರು, ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ಇಲ್ಲವಾಗಿದೆ. ಆದ್ದರಿಂದ ಅಲ್ಪಸಂಖ್ಯಾತ ಮುಸಲ್ಮಾನ ಬಂಧುಗಳಿಗೆ ಮಾತ್ರ ರಕ್ಷಣೆ ಕೊಡುವುದಾಗಿ ರಾಜ್ಯ ಸರಕಾರ ಘೋಷಿಸಲಿ ಎಂದು ವಿಧಾನಪರಿಷತ್ ವಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು ಆಗ್ರಹಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಇಂದು ಅವರು ಮಾಧ್ಯಮಗಳ ಜೊತೆ ಮಾತನಾಡಿದರು. 
ಕರ್ನಾಟಕದಲ್ಲಿ ಹಿಂದೂ ರಾಷ್ಟ್ರೀಯ ನಾಯಕರು, ದೇವಾನುದೇವತೆಗಳ ಭಾವಚಿತ್ರದ ಮೆರವಣಿಗೆ ಮಾಡಬಾರದೆಂದು ಘೋಷಣೆ ಮಾಡಿ  ಅಲ್ಪಸಂಖ್ಯಾತರಿಗೆ ಸಂಬಂಧಿಸಿದ ಮೆರವಣಿಗೆ ಮಾತ್ರ ಮಾಡಬೇಕೆಂದು ಪ್ರಕಟಿಸಿ ಎಂದು ಹೇಳಿದರು. ಗಣಪತಿ ಉತ್ಸವ, ಶಿವಾಜಿ ಜಯಂತಿ ಬಂದಾಗ ಮಾತ್ರ ಹೀಗಾಗುತ್ತಿದೆ. ಕರ್ನಾಟಕದಲ್ಲಿ ಈ ರೀತಿಯ ತುಷ್ಟೀಕರಣ ಏಕೆ  ಆಗುತ್ತಿದೆ ಎಂದು ಅವರು ಪ್ರಶ್ನಿಸಿದರು.
ಡಿ.ಕೆ.ಶಿವಕುಮಾರ್ ಅವರ ಮೈ ಬ್ರದರ್ಸ್‌ ಪಾಲಿಸಿಯಿಂದ ಹೀಗಾಗುತ್ತಿದೆ. ಹಾಗಿದ್ದರೆ ಹಿಂದೂಗಳು ನಿಮ್ಮ ಸಹೋದರರಲ್ಲವೇ ? ವಿಧಾನಸೌಧದಲ್ಲಿ ಪಾಕಿಸ್ತಾನಕ್ಕೆ ಜಯವಾಗಲಿ ಎಂದು ಘೋಷಣೆ ಕೂಗಿದಾಗ ಮುಖ್ಯಮಂತ್ರಿಗಳು ಕ್ರಮ ಕೈಗೊಂಡಿದ್ದರೆ ಹೀಗಾಗುತ್ತಿರಲಿಲ್ಲ ಎಂದು ಗಮನ ಸೆಳೆದರು. 
ಮೇಲುಕೋಟೆ, ಮಂಡ್ಯ, ಶಿವಮೊಗ್ಗ, ಮಂಗಳೂರು, ಕಲಬುರ್ಗಿ, ಹುಬ್ಬಳ್ಳಿ, ಬೆಂಗಳೂರಿನಲ್ಲಿ ಪದೇಪದೇ ಗಲಾಟೆಗಳಾಗುತ್ತಿವೆ. ಈ ಸರಕಾರ ಸಂಪೂರ್ಣವಾಗಿ ತುಷ್ಟೀಕರಣ ಮಾಡುತ್ತಿದೆ. ಸರಕಾರವು ತುಷ್ಟೀಕರಣ ನೀತಿಯನ್ನು ಬಿಡಬೇಕೆಂದು ಅವರು ತಿಳಿಸಿದರು.
ಕಲ್ಲೆಸೆತದಿಂದ ಎಸ್ಪಿ ತಲೆಗೂ ಏಟು ಬಿದ್ದಿದೆ. ಇಬ್ಬರು ಕಾನ್‍ಸ್ಟೇಬಲ್‍ಗಳಿಗೆ ಗಾಯಗಳಾಗಿವೆ. ಕಲ್ಲು, ತೂರಿದ್ದಾರೆ. ಚಪ್ಪಲಿ-ಶೂ ಎಸೆದಿದ್ದಾರೆ. ಆದರೆ, ಯಾರನ್ನೂ ಬಂಧಿಸಿರಲಿಲ್ಲ. ಹಿಂದೂ ಕಾರ್ಯಕರ್ತರು ಒತ್ತಡ ಹಾಕಿದ ಬಳಿಕ 8 ಜನರನ್ನು ಬಂಧಿಸಿದ್ದಾರೆ ಎಂದು ವಿವರಿಸಿದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.