2026-03-07 04:55:40

Nadoja Hampana | ಕನ್ನಡ ಜೈನ ಕವಿಗಳ ಕೃತಿಗಳು ಇತರ ಭಾಷೆಗಳಿಗೂ ಅನುವಾದಗೊಳ್ಳಬೇಕು ನಾಡೋಜ ಹಂಪನಾ | Speed News Kannada

Nadoja Hampana | ಕನ್ನಡ ಜೈನ ಕವಿಗಳ ಕೃತಿಗಳು ಇತರ ಭಾಷೆಗಳಿಗೂ ಅನುವಾದಗೊಳ್ಳಬೇಕು ನಾಡೋಜ ಹಂಪನಾ | Speed News Kannada

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರ ಅಧ್ಯಕ್ಷತೆಯಲ್ಲಿ, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಜೀ ಅವರ ಉಪಸ್ಥಿತಿಯಲ್ಲಿ  ಫೆ. 26ರಂದು ಸ್ಕೌಟ್ಸ್ ಮತ್ತು ಗೈಡ್ಸ್ ಸಭಾಂಗಣದಲ್ಲಿ ಕರ್ನಾಟಕದ ಎಲ್ಲ ಜಿಲ್ಲಾ ತಂಡಗಳಿಗೆ ಪ್ರಶಿಕ್ಷಣ ಕಾರ್ಯಾಗಾರ ನಡೆಯಲಿದೆ ಎಂದು ಪ್ರಶಿಕ್ಷಣ ಅಭಿಯಾನದ ರಾಜ್ಯ ಸಂಚಾಲಕ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ತಿಳಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ರಾಜ್ಯದ ಪ್ರತಿ ಪ್ರಶಿಕ್ಷಣ ಜಿಲ್ಲೆಯಿಂದ ತಂಡವನ್ನು ನಿಯೋಜಿಸಲಾಗಿದೆ ಎಂದು ಹೇಳಿದರು. 1,156 ಸ್ಥಳಗಳಲ್ಲಿ ಪ್ರಶಿಕ್ಷಣ ವರ್ಗ ನಡೆಯಲಿದೆ. ಒಂದು ಪ್ರಶಿಕ್ಷಣದಲ್ಲಿ ಸರಾಸರಿ 200 ಪದಾಧಿಕಾರಿಗಳು ಭಾಗವಹಿಸಲಿದ್ದು, ಸುಮಾರು 2 ಲಕ್ಷಕ್ಕೂ ಹೆಚ್ಚು ಪದಾಧಿಕಾರಿಗಳಿಗೆ ಪ್ರಶಿಕ್ಷಣ ನೀಡಲಿದ್ದೇವೆ ಎಂದು ತಿಳಿಸಿದರು.
ಬಿಜೆಪಿ, ಇತರ ರಾಜಕೀಯ ಪಕ್ಷಗಳಿಂದ ಭಿನ್ನವಾಗಿದೆ. ನಮ್ಮ ಪಕ್ಷದಲ್ಲಿ ವ್ಯಕ್ತಿ ನಿರ್ಮಾಣದಿಂದ ಸಂಘಟನೆ ನಿರ್ಮಾಣ ನಡೆಸಲಾಗುತ್ತದೆ. ಸಂಘಟನೆ ನಿರ್ಮಾಣದಿಂದ ರಾಷ್ಟ್ರ ನಿರ್ಮಾಣವು ಪ್ರಶಿಕ್ಷಣದ ಮುಖ್ಯ ಗುರಿ. ಕಾರ್ಯಕರ್ತರಲ್ಲಿ ಸಮರ್ಥ ಮತ್ತು ದಕ್ಷ ವೈಚಾರಿಕ ಬದ್ಧತೆ ಬೆಳೆಸುವುದು, ಸಾಮಾಜಿಕ ಸಂವೇದನೆ, ಜವಾಬ್ದಾರಿ ಮೂಡಿಸುವುದು, ರಾಷ್ಟ್ರೀಯ- ಅಂತರರಾಷ್ಟ್ರೀಯ ನರೇಟಿವ್‍ಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶ ಪ್ರಶಿಕ್ಷಣದ್ದು ಎಂದು ತಿಳಿಸಿದರು. 
ಬಿಜೆಪಿ ಸಂಘಟನಾ ಪರ್ವ ಪ್ರಾರಂಭವಾಗಿದೆ. ಸದಸ್ಯತ್ವ ಅಭಿಯಾನ, ಸಕ್ರಿಯ ಸದಸ್ಯರ ಅಭಿಯಾನ, ಬೂತ್, ಮಂಡಲ, ಜಿಲ್ಲಾ ಅಧ್ಯಕ್ಷರಿಂದ ರಾಷ್ಟ್ರೀಯ ಅಧ್ಯಕ್ಷರವರೆಗೆ ಸಂಘಟನಾ ಪರ್ವ ನಡೆಯುತ್ತದೆ ಎಂದು ವಿವರಿಸಿದರು. ನಿತಿನ್ ನಬೀನ್ ಜೀ ಅವರು ರಾಷ್ಟ್ರೀಯ ಅಧ್ಯಕ್ಷರಾದ ತಕ್ಷಣ ಪಂಡಿತ್ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನಕ್ಕೆ ಫೆ. 5ರಂದು ಚಾಲನೆ ಕೊಟ್ಟಿದ್ದಾರೆ ಎಂದರು. ದಕ್ಷಿಣ ಭಾರತದ ರಾಜ್ಯಗಳಲ್ಲಿ ಪ್ರಶಿಕ್ಷಣ ಆಯೋಜನೆ ಕುರಿತು ಫೆ.18ರಂದು ಕರ್ನಾಟಕ, ತಮಿಳುನಾಡು, ತೆಲಂಗಾಣ, ಕೇರಳ, ಪಾಂಡಿಚೇರಿ ರಾಜ್ಯಗಳ ಕಾರ್ಯಾಗಾರ ಹೈದರಾಬಾದ್‍ನಲ್ಲಿ ನಡೆದಿದೆ ಎಂದು ಹೇಳಿದರು.
ಪ್ರಶಿಕ್ಷಣ ಅಭಿಯಾನದ ರಾಜ್ಯ ಸಹ-ಸಂಚಾಲಕ ವಿಕಾಸ್ ಕುಮಾರ್ ಪಿ, ಪ್ರಶಿಕ್ಷಣ ಅಭಿಯಾನದ ಸದಸ್ಯರಾದ ಮಧುಶ್ರೀ ಮಂಜುನಾಥ್, ಪೂರ್ಣಿಮಾ ಪ್ರಕಾಶ್ ಇದ್ದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.