2026-04-23 10:54:45

Nagaland woman commits suicide in Chikkamagaluru | ಚಿಕ್ಕಮಗಳೂರಲ್ಲಿ ನಾಗಾಲ್ಯಾಂಡ್ ಮೂಲದ ಯುವತಿ ಆತ್ಮಹತ್ಯೆ | Speed news kannada

Nagaland woman commits suicide in Chikkamagaluru | ಚಿಕ್ಕಮಗಳೂರಲ್ಲಿ ನಾಗಾಲ್ಯಾಂಡ್ ಮೂಲದ ಯುವತಿ ಆತ್ಮಹತ್ಯೆ | Speed news kannada

ನಾಗಾಲ್ಯಾಂಡ್ ಮೂಲದ ಯುವತಿಯೊಬ್ಬಳ ಶವ ಚಿಕ್ಕಮಗಳೂರಿನ ಅರವಿಂದ ನಗರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಯುವತಿಯನ್ನು ಲಿನ್ಸುಲಾ (22) ಎಂದು ಗುರುತಿಸಲಾಗಿದೆ. ಯುವತಿ ರೆಸಾರ್ಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದಳು. ಎರಡು ದಿನದ ಹಿಂದೆ ಕಿವಿಶೆ ಕಿನಿಮಿ ಎಂಬವರ ಜೊತೆ ಅರ್ಧ ಗಂಟೆ ಮಾತನಾಡಿದ್ದಳು ಎಂದು ತಿಳಿದು ಬಂದಿದೆ. 
ಯುವತಿ ಸಾವಿಗೂ ಮುನ್ನ ರಾಜೇಶ್ ಹಾಗೂ ತೇಜಸ್ ಎಂಬವರ ಹೆಸರನ್ನು ಡೈರಿಯಲ್ಲಿ ಬರೆದಿಟ್ಟಿದ್ದಾಳೆ. ಲಿನ್ಸುಲಾಳಿಗೆ ರಾಜೇಶ್ ಹಾಗೂ ತೇಜಸ್ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದರು ಎಂದು ಲಶಿಲಾ ಇಂಚುಗರ್ ಎಂಬವರು ಬಸವನಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಸವನಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.