2026-06-08 01:23:14

Namma Metro Fare Hike | DK Shivakumar | ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ: ಕೇಂದ್ರದೊಂದಿಗೆ ಚರ್ಚೆ: ಡಿಸಿಎಂ ಡಿಕೆ ಶಿವಕುಮಾರ್‌ | SNK

Namma Metro Fare Hike | DK Shivakumar | ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ: ಕೇಂದ್ರದೊಂದಿಗೆ ಚರ್ಚೆ: ಡಿಸಿಎಂ ಡಿಕೆ ಶಿವಕುಮಾರ್‌ | SNK

ಮಂಗಳೂರು: ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣ ದರ ಏರಿಸಿ ಸಾರ್ವಜಿನಿಕರಿಗೆ ಯಾವುದೇ ಕಾರಣಕ್ಕೂ ತೊಂದರೆ ಕೊಡಲು ಬಿಡುವುದಿಲ್ಲ.ಮೆಟ್ರೋಗೆ ಎಂದೇ ದೆಹಲಿಯಲ್ಲಿ ಅಧ್ಯಕ್ಷರಿರುತ್ತಾರೆ. ಶೀಘ್ರವೇ ಅವರೊಂದಿಗೆ ಮಾತನಾಡಿ ಪರಿಹಾರ ರೂಪಿಸಲು ಪ್ರಯತ್ನಿಸುವುದಾಗಿ ಉಪ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 
ಬೆಂಗಳೂರಿಗೆ ಹೊರಡುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೆಟ್ರೋ ಪ್ರಯಾಣ ದರ ಕುರಿತು ತೀರ್ಮಾನ ಮಾಡಲು ಪ್ರತ್ಯೇಕ ಸಮಿತಿ ಇದೆ. ಕೇಂದ್ರ ಸರ್ಕಾರದ ಕಾರ್ಯದರ್ಶಿ ಇದರ ಮುಖ್ಯಸ್ಥರಾಗಿರುತ್ತಾರೆ. ದರ ಏರಿಕೆ ಸಂಬಂಧ ರಾಜ್ಯ ಸರ್ಕಾರದ ಅಭಿಪ್ರಾಯವನ್ನು ಕೇಳಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಮುಖ್ಯಮಂತ್ರಿ ಆಗುವಿರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಕನಸು ಜನರಿಗಿದೆ, ಶಾಸಕರಿಗೂ ಇದೆ, ನಿಮಗೂ (ಮಾಧ್ಯಮ) ಇದೆ. ಪಕ್ಷ ಏನು ಹೇಳುತ್ತದೆ ಅದನ್ನು ಕೇಳಬೇಕು ಎಂದು ಉತ್ತರಿಸಿದರು. 
ಮೆಟ್ರೋ ಪ್ರಯಾಣ ದರ ಕುರಿತು ಪರಸ್ಪರ ಕೆಸರೆರಚಾಟ ಮುಂದುವರೆದಿದೆ. ಬಿಜೆಪಿ ಮುಖಂಡರು ಕಾಂಗ್ರೆಸ್‌ ಸರ್ಕಾರ ಕಾರಣ ಎಂದರೆ ಕಾಂಗ್ರೆಸ್‌ ಮುಖಂಡರು ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡುತ್ತಿದ್ದಾರೆ.
ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿ ಯಾವುದೇ ದರ ಹೆಚ್ಚಳ ಮಾಡಿದರೂ ಜನ ಸಂತೋಷವಾಗಿ ಕೊಡುತ್ತಾರೆ ಅನ್ನುವುದು ಮುಖ್ಯಮಂತ್ರಿಗಳ ಭ್ರಮೆ. ಈ ಬಗ್ಗೆ ಎಚ್ಚೆತ್ತುಕೊಂಡು ಜನರೇ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಅಸಮಾಧಾನ ಹೊರಹಾಕಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮೆಟ್ರೋ ಪ್ರಯಾಣ ದರ ಏರಿಕೆಗೆ ಕೇಂದ್ರ ಸರ್ಕಾರ ಕಾರಣ ಎಂದು ಸ್ಪಷ್ಟೀಕರಣ ನೀಡಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.