2026-07-23 06:40:31

Namma Metro Fares Increase By 5% Effective From February 9 | ನಮ್ಮ ಮೆಟ್ರೋ ಪ್ರಯಾಣ ದರ ಶೇ 5ರಷ್ಟು ಹೆಚ್ಚಳ ಫೆಬ್ರವರಿ 9ರಿಂದ ಜಾರಿ | Speed News Kannada

Namma Metro Fares Increase By 5% Effective From February 9 | ನಮ್ಮ ಮೆಟ್ರೋ ಪ್ರಯಾಣ ದರ ಶೇ 5ರಷ್ಟು ಹೆಚ್ಚಳ ಫೆಬ್ರವರಿ 9ರಿಂದ ಜಾರಿ | Speed News Kannada

ಬೆಂಗಳೂರು: ಬೆಂಗಳೂರಿನ “ನಮ್ಮ ಮೆಟ್ರೋ” ಪ್ರಯಾಣ ದರ ಪರಿಷ್ಕರಣೆ ಮಾಡಲಾಗಿದೆ. ನಮ್ಮ ಮೆಟ್ರೋ ಪ್ರಯಾಣ ದರವು ಶೇ 5ರಷ್ಟು ಅಧಿಕೃತವಾಗಿ ಹೆಚ್ಚಳವಾಗಿದ್ದು,ಹೊಸ ಪ್ರಯಾಣ ದರ ಮಾಹಿತಿಯನ್ನು ಬಿಎಂಆರ್‌ಸಿಎಲ್  ಬಿಡುಗಡೆ ಮಾಡಿದೆ. ಹೊಸ ಬೆಲೆಯು ಫೆಬ್ರವರಿ 9ರಿಂದ ಜಾರಿಗೆ ಬರಲಿದೆ.
ದರ ನಿಗದಿ ಸಮಿತಿ ಪ್ರಕಾರ ಬಿಎಂಆರ್‌ಸಿಎಲ್‌ಗೆ 7.5 ವರ್ಷಗಳ ನಂತರ ಪರಿಷ್ಕೃತ ದರ ರಚನೆಯನ್ನು ಮತ್ತು 29ರಿಂದ 10ರ ರವರೆಗೆ ದರದ ವಲಯಗಳನ್ನು ಶಿಫಾರಸು ಮಾಡುವಾಗ ದರ ಪರಿಷ್ಕರಣೆ ಸರಾಸರಿ ಶೇ 51.55 ರಷ್ಟು ಹೆಚ್ಚಳಕ್ಕೆ ಕಾರಣವಾಯಿತು ಎಂದು ಬಿಎಂಆರ್‌ಸಿಎಲ್ ಸ್ಪಷ್ಟನೆ ನೀಡಿದೆ.
ಹೊಸ ದರವು ಫೆಬ್ರವರಿ 9ರಿಂದ ಜಾರಿಗೆ ಬರಲಿದೆ. ಭವಿಷ್ಯದಲ್ಲಿ ಇಂತಹ ದರ ಹೆಚ್ಚಳದ ಪರಿಸ್ಥಿತಿಯನ್ನು ತಪ್ಪಿಸುವ ನಿಟ್ಟಿನಲ್ಲಿ  ಸಮಿತಿಯು ತನ್ನ ವರದಿಯಲ್ಲಿ ಪಾರದರ್ಶಕ ವಾರ್ಷಿಕ ಸ್ವಯಂಚಾಲಿತ ದರ ಪರಿಷ್ಕರಣೆ ಸೂತ್ರವನ್ನು ಅನುಸರಿಸಿರುವುದಾಗಿ ತಿಳಿಸಿದೆ. ವಾರ್ಷಿಕ ಕಾರ್ಯಾಚರಣೆ ಮತ್ತು ನಿರ್ವಹಣೆಯ ಶೇ.ವಾರು ವೆಚ್ಚ ಅಥವಾ ವಾರ್ಷಿಕ ಶೇ 5 ಯಾವುದು ಕಡಿಮೆಯೋ ಮತ್ತು ಮುಂದಿನ ಒಂದು ರೂಪಾಯಿಗೆ ಪೂರ್ಣಾಂಕಗೊಳಿಸಿ ದರವನ್ನು ಪರಿಷ್ಕರಿಸಲು ಶಿಫಾರಸು ಮಾಡಿದೆ. 
96.10 ಕಿ.ಮೀಗಳ ಸಂಪೂರ್ಣ ಜಾಲದಲ್ಲಿರುವ 10 ದರ ವಲಯಗಳಲ್ಲಿ, ಕನಿಷ್ಠ 1 ರೂ. ಹಾಗೂ ಗರಿಷ್ಠ 5 ರೂ. ಹಚ್ಚಳವಾಗಿದೆ. 2024 - 25 (31 ಮಾರ್ಚ್ 2025) ಹಣಕಾಸು ವರ್ಷದ ಅಂಕಿ ಅಂಶಗಳನ್ನು, ಹಣಕಾಸು ವರ್ಷ 2023-24 (31 ಮಾರ್ಚ್ 2024) ರ ಅಂಕಿ ಅಂಶಗಳಿಗೆ ಹೋಲಿಸಿದರೆ, ಸೂತ್ರ-ಆಧಾರಿತ ದರ ಪರಿಷ್ಕರಣೆ ಶೇ 10.20ರಷ್ಟು ವೆಚ್ಚ ಹೆಚ್ಚಳವನ್ನು ಸೂಚಿಸುತ್ತದೆ. ಆದಾಗ್ಯೂ, FFC ನಿಬಂಧನೆಗೆ ಅನುಗುಣವಾಗಿ ದರ ಪರಿಷ್ಕರಣೆಯನ್ನು ಕೇವಲ ಶೇ 5% ಕ್ಕೆ ಸೀಮಿತಗೊಳಿಸಲಾಗಿದೆ ಎಂದು ಬಿಎಂಆರ್‌ಸಿಎಲ್ ಹೇಳಿದೆ.

ಮುಖ್ಯವಾಗಿ, BMRCL ಸ್ಮಾರ್ಟ್-ಕಾರ್ಡ್/NCMC ಬಳಕೆದಾರರಿಗೆ ಅಸ್ತಿತ್ವದಲ್ಲಿರುವ ಎಲ್ಲಾ ಪ್ರಯಾಣಿಕ-ಸ್ನೇಹಿ ರಿಯಾಯಿತಿಗಳು ಮುಂದುವರಿಯಲಿವೆ. 
ಪೀಕ್ ಅವರ್‌ ಸಮಯದಲ್ಲಿ ಶೇ 5 ರಿಯಾಯಿತಿ; ಪೀಕ್ ಅವರ್‌ ಅಲ್ಲದ ಸಮಯದಲ್ಲಿ ಶೇ 10 ರಿಯಾಯಿತಿ; ಭಾನುವಾರ ಮತ್ತು ಮೂರು ಗೊತ್ತುಪಡಿಸಿದ ರಾಷ್ಟ್ರೀಯ ರಜಾದಿನಗಳಲ್ಲಿ ಶೇ 10 ರಿಯಾಯಿತಿ ಮುಂದುವರೆಯಲಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.