2026-06-08 06:47:15

Namma Metro Fares | ನಮ್ಮ ಮೆಟ್ರೋ ಪ್ರಯಾಣ ದರ ತಡೆ ಹಿಡಿಯುವಂತೆ ಕೇಂದ್ರ ಸಚಿವರಿಗೆ ತೇಜಸ್ವಿ ಸೂರ್ಯ ಮನವಿ | Speed News Kannada

Namma Metro Fares | ನಮ್ಮ ಮೆಟ್ರೋ ಪ್ರಯಾಣ ದರ ತಡೆ ಹಿಡಿಯುವಂತೆ ಕೇಂದ್ರ ಸಚಿವರಿಗೆ ತೇಜಸ್ವಿ ಸೂರ್ಯ ಮನವಿ | Speed News Kannada

ನವದೆಹಲಿ: ಬೆಂಗಳೂರಿನ “ನಮ್ಮ ಮೆಟ್ರೋ” ಪ್ರಯಾಣ ದರ ಏರಿಕೆ ಕುರಿತು ಬೆಂಗಳೂರು ದಕ್ಷಿಣ ಲೋಕಸಭಾ ಸದಸ್ಯ ತೇಜಸ್ವಿ ಸೂರ್ಯ ಅವರು ಇಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಖಟ್ಟರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ಮೆಟ್ರೋ ಪ್ರಯಾಣ ದರ ಏರಿಕೆಗೆ ಕಾಂಗ್ರೆಸ್‌ ಸರ್ಕಾರವೇ ಕಾರಣವಾಗಿದೆ. ಫೆಬ್ರವರಿ 9 ರಿಂದ ಹೊಸ ದರ ಜಾರಿಗೆ ಬರಲಿದೆ. ಸಾರ್ವಜನಿಕರ ವಿರೋಧವನ್ನು ಲೆಕ್ಕಿಸದೆ ಪ್ರಯಾಣಿಕರ ಮೇಲೆ ಅನಗತ್ಯ ಹೊರೆಯನ್ನು ಹೇರಿದೆ ಎಂದು ಅವರು ಸಚಿವರ ಗಮನಕ್ಕೆ ತಂದಿದ್ದಾರೆ.
ಈ ಹಿನ್ನೆಲೆಯಲ್ಲಿ ದರ ನಿಗದಿ ಸಮಿತಿಯನ್ನು ಪುನರ್‌ ರಚಿಸುವಂತೆ ಕೋರಲಾಯಿತು ಎಂದು ತೇಜಸ್ವಿ ಸೂರ್ಯ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ದರ ಲೆಕ್ಕಾಚಾರ ಕುರಿತು ತಪ್ಪು ಮಾಹಿತಿಗಳಿವೆ. ಈ ದೋಷಪೂರಿತ ದರ ಪರಿಷ್ಕರಣೆ ಜಾರಿಗೆ ಬರಬಾರದು. ವಾರ್ಷಿಕ ದರ ಏರಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ, ಅಗತ್ಯವಿದ್ದರೆ ಹೊಸ ಸಮಿತಿಯ ಮೂಲಕ ಸಾರ್ವಜನಿಕ ಹಿತದೃಷ್ಟಿಯಿಂದ ನೂತನ ಮತ್ತು ಕೈಗೆಟಕುವ ದರ ನಿಗದಿಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದ್ದಾರೆ. ಸಕಾರಾತ್ಮಕವಾಗಿ ಸ್ಪಂದಿಸಿರುವ ಸಚಿವರು ಸೂಕ್ತ ಕ್ರಮ ಜರುಗಿಸುವ ಭರವಸೆ ನೀಡಿದ್ದಾರೆ ಎಂದೂ ತೇಜಸ್ವಿ ಸೂರ್ಯ ಹೇಳಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.