2026-06-25 03:53:05

NEET ಪರೀಕ್ಷೆ: ಹೆಚ್ಚುತ್ತಿರುವ ಸಾವಿನ ಸಂಖ್ಯೆ:2025ರಲ್ಲಿ 32 ಪ್ರಕರಣ ದಾಖಲು| Speed News Kannada

NEET ಪರೀಕ್ಷೆ: ಹೆಚ್ಚುತ್ತಿರುವ ಸಾವಿನ ಸಂಖ್ಯೆ:2025ರಲ್ಲಿ 32 ಪ್ರಕರಣ ದಾಖಲು| Speed News Kannada

ನವದೆಹಲಿ: ಕಳೆದ ಐದು ವರ್ಷಗಳಲ್ಲಿ ನೀಟ್‌ಗೆ ಪರೀಕ್ಷೆಗೆ ಸಂಬಂಧಿಸಿದಂತೆ ಕನಿಷ್ಠ 93 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. 2025ರ ಒಂದೇವರ್ಷದಲ್ಲಿ 32 ವಿದ್ಯಾರ್ಥಿಗಳು ಸಾವಿಗೀಡಾಗಿದ್ದಾರೆ.

ಈ ವರ್ಷ (2026) ದಲ್ಲೂ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು ಮರು ಪರೀಕ್ಷೆ ನಿಗದಿ ಮಾಡಲಾಗಿದೆ. ಈಗಾಗಲೇ ಪರೀಕ್ಷೆ ಬರೆದ 14 ವಿದ್ಯಾರ್ಥಿಗಳು ಅಸುನೀಗಿದ್ದಾರೆ.

ವರ್ಷದಿಂದ ವರ್ಷಕ್ಕೆ NEET ಪರೀಕ್ಷೆ ಬರೆದ ವಿದ್ಯಾರ್ಥಿಗಳ ಸಾವಿನ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕ ಮೂಡಿಸಿದೆ. 2021ರಲ್ಲಿ 4 ಪ್ರಕರಣಗಳು ದಾಖಲಾಗಿದ್ದರೆ 2022 ರಲ್ಲಿ 9, 2023ರಲ್ಲಿ 14 ಮತ್ತು 2024ರಲ್ಲಿ 19 ವಿದ್ಯಾರ್ಥಿಗಳು ಸಾವಿಗೀಡಾಗಿದ್ದಾರೆ.

ಪ್ರತಿ ವರ್ಷ ವೈದ್ಯರಾಗಲೇಬೇಕು ಎಂದು ಕನಸು ಕಂಡ ಸುಮಾರು 20ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೀಟ್‌ ಪರೀಕ್ಷೆಗೆ ಹಾಜರಾಗುತ್ತಾರೆ.

ಹಗಲು ರಾತ್ರಿ ಎನ್ನದೆ, ಶ್ರಮ ಹಾಕಿ ಪರೀಕ್ಷೆ ಎದುರಿಸುತ್ತಾರೆ. ಆದರೆ, ಅನೇಕ ಸಂದರ್ಭಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಂತಹ ಪ್ರಕರಣಗಳು ಸಂಭವಿಸಿ ಕಷ್ಟಪಟ್ಟು ಪರೀಕ್ಷೆ ಬರೆದ ಮಕ್ಕಳ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತದೆ. ಇದರಿಂದಲೂ ನೊಂದ ವಿದ್ಯಾರ್ಥಿಗಳು ಸಾವಿನ ಹಾದಿ ಹಿಡಿಯುತ್ತಿದ್ದಾರೆ.

Share:


Tags:

neet deaths

Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.