2026-06-25 02:00:32

neet exam; youth congress protest against pm modi government| ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್‌ ಪ್ರತಿಭಟನೆ| Speed News Kannada

neet exam; youth congress protest against pm modi government| ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್‌ ಪ್ರತಿಭಟನೆ| Speed News Kannada

ಬೆಂಗಳೂರು: ನೀಟ್ (NEET)ಪರೀಕ್ಷೆ ರದ್ದು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್ ಸಮಿತಿ ಇಂದು ನಗರದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿತು. ರಾಜ್ಯ ಯುವ ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಮಂಜುನಾಥ್ ಹೆಚ್.ಎಸ್. ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಭಾಗಿಯಾಗಿದ್ದರು.

ಮಂಜುನಾಥ್ ಮಾತನಾಡಿ ಬಿಜೆಪಿ ಸರ್ಕಾರದಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಸತತವಾಗಿ ನಡೆಯುತ್ತಿದೆ. 2024ರಲ್ಲಿ ಮತ್ತು ಈಗ ನಡೆದಿದೆ. ಲಕ್ಷಾಂತರ ಬಡ ಮಕ್ಕಳು ವೈದ್ಯರಾಗುವ ಕನಸಿಗೆ ಕೇಂದ್ರ ಸರ್ಕಾರ ಕೊಳ್ಳಿ ಇಟ್ಟಿದೆ. ಓದಿ ಪಾಸಾಗುವ ವಿದ್ಯಾರ್ಥಿಗಳಿಗೆ ಇಂದು ಭವಿಷ್ಯವಿಲ್ಲ. ಕಾಪಿ ಹೊಡೆದು ಪಾಸಾಗುವ ಶ್ರೀಮಂತ ಕುಟುಂಬದ ಮಕ್ಕಳು ವೈದ್ಯರಾಗುತ್ತಾರೆ. ಹಲವಾರು ತಿಂಗಳು ಕಾಲ ಫೀಸು ಕಟ್ಟಿ ನೀಟ್ ಪರೀಕ್ಷೆ ತಯಾರುಗುವ ವಿದ್ಯಾರ್ಥಿಗಳು ಮರು ಪರೀಕ್ಷೆಯಿಂದ ಮತ್ತೆ ತಯಾರಿಗೆ ಹಣ ಖರ್ಚಾಗುತ್ತದೆ. ಈ ಮೊತ್ತವನ್ನು ಯಾರು ಭರಿಸುತ್ತಾರೆ ಎಂದು ಪ್ರಶ್ನಿಸಿದರು.

22 ಲಕ್ಷ ವಿದ್ಯಾರ್ಥಿಗಳು ನೀಟ್ ಪರೀಕ್ಷೆ ಬರೆದಿದ್ದು, ಮರು ಪರೀಕ್ಷೆಯಿಂದ ವಿದ್ಯಾರ್ಥಿಗಳು ಮಾನಸಿಕವಾಗಿ ಕುಗ್ಗಿಹೋಗುತ್ತಾರೆ. ಶಿಕ್ಷಣ ಕುರಿತು ಅರಿವು ಇಲ್ಲದ ಪ್ರಧಾನಿ ನರೇಂದ್ರಮೋದಿರವರಿಗೆ ಮಕ್ಕಳ ಭವಿಷ್ಯ ಜೊತೆಯಲ್ಲಿ ಕೇಂದ್ರ ಸರ್ಕಾರ ಚಲ್ಲಾಟವಾಡುತ್ತಿದೆ ಎಂದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ ಪಿ.ಎಸ್.ಐ.ನೇಮಕಾತಿ ಪರೀಕ್ಷೆ ಪತ್ರಿಕೆ ಸೋರಿಕೆಯಾಗಿತ್ತು. ಒಟ್ಟಾರೆ ಬಿಜೆಪಿ ಸರ್ಕಾರಗಳು ಪ್ರಶ್ನೆ ಪತ್ರಿಕೆ ಸೋರಿಕೆಯ ರೂವಾರಿಗಳು ಎಂದು ವ್ಯಂಗ್ಯವಾಡಿ ಪೇಪರ್ ಸೋರಿಕೆ ಮಾಫಿಯ ಕಡಿವಾಣ ಹಾಕಬೇಕು ಮತ್ತು ಇದರ ಹಿಂದಿನ ಶಕ್ತಿಗಳನ್ನು ಬಂಧಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.