2026-06-08 01:32:47

neet re exam on june21st| ಜೂನ್ 21ಕ್ಕೆ ನೀಟ್‌ ಮರುಪರೀಕ್ಷೆ | Speed News Kannada

neet re exam on june21st| ಜೂನ್ 21ಕ್ಕೆ ನೀಟ್‌ ಮರುಪರೀಕ್ಷೆ | Speed News Kannada

 

ನವದೆಹಲಿ: ವೈದ್ಯಕೀಯ ಪದವಿ ಕೋರ್ಸ್‌ಗಳ ರಾಷ್ಟ್ರೀಯ ಅರ್ಹತಾ ಪ್ರವೇಶದ ಮರು ಪರೀಕ್ಷೆಯು (ನೀಟ್-ಯುಜಿ) ಜೂನ್ 21ರಂದು ನಡೆಯಲಿದೆ ಎಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಪ್ರಕಟಣೆ ಹೊರಡಿಸಿದೆ.

ಈ ಸಂಬಂಧ ಎನ್‌ಟಿಎ ಪ್ರಕಟಣೆ ಹೊರಡಿಸಿದ್ದು, ಮರು ಪರೀಕ್ಷೆಯನ್ನು 2026ರ ಜೂನ್ 21, ಭಾನುವಾರ ನಡೆಯಲಿದೆ.  ಅಧಿಕೃತ ಚಾನಲ್‌ಗಳ ಮೂಲಕವೇ ಅಭ್ಯರ್ಥಿಗಳು ಹಾಗೂ ಪೋಷಕರು ಮಾಹಿತಿ ಪಡೆದುಕೊಳ್ಳಬೇಕು ಎಂದೂ ಕೋರಿದೆ.

ವೈದ್ಯಕೀಯ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ಮೇ 3ರಂದು ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಈ ಆರೋಪದ ಹಿನ್ನೆಲೆಯಲ್ಲಿ ಆ ಪರೀಕ್ಷೆಯನ್ನು ಎನ್‌ಟಿಎ ರದ್ದುಗೊಳಿಸಿತ್ತು.

ವಿಪಕ್ಷಗಳು ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದವು. ದೇಶಾದ್ಯಂದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.