ನವದೆಹಲಿ: ವೈದ್ಯಕೀಯ ಪದವಿ ಕೋರ್ಸ್‌ಗಳ ರಾಷ್ಟ್ರೀಯ ಅರ್ಹತಾ ಪ್ರವೇಶದ ಮರು ಪರೀಕ್ಷೆಯು (ನೀಟ್-ಯುಜಿ) ಜೂನ್ 21ರಂದು ನಡೆಯಲಿದೆ ಎಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಪ್ರಕಟಣೆ ಹೊರಡಿಸಿದೆ.
ಈ ಸಂಬಂಧ ಎನ್‌ಟಿಎ ಪ್ರಕಟಣೆ ಹೊರಡಿಸಿದ್ದು, ಮರು ಪರೀಕ್ಷೆಯನ್ನು 2026ರ ಜೂನ್ 21, ಭಾನುವಾರ ನಡೆಯಲಿದೆ. ಅಧಿಕೃತ ಚಾನಲ್‌ಗಳ ಮೂಲಕವೇ ಅಭ್ಯರ್ಥಿಗಳು ಹಾಗೂ ಪೋಷಕರು ಮಾಹಿತಿ ಪಡೆದುಕೊಳ್ಳಬೇಕು ಎಂದೂ ಕೋರಿದೆ.
ವೈದ್ಯಕೀಯ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ಮೇ 3ರಂದು ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಈ ಆರೋಪದ ಹಿನ್ನೆಲೆಯಲ್ಲಿ ಆ ಪರೀಕ್ಷೆಯನ್ನು ಎನ್‌ಟಿಎ ರದ್ದುಗೊಳಿಸಿತ್ತು.
ವಿಪಕ್ಷಗಳು ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದವು. ದೇಶಾದ್ಯಂದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು.