2026-06-08 01:27:04

New guests from Africa arrive at Bannerghatta Zoo | ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ಹೊಸ ಅತಿಥಿಗಳು | Speed news kannada

New guests from Africa arrive at Bannerghatta Zoo | ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ಹೊಸ ಅತಿಥಿಗಳು | Speed news kannada

ಮಧ್ಯರಾತ್ರಿ ದಕ್ಷಿಣಾ ಆಫ್ರಿಕಾದಿಂದ ಬೆಂಗಳೂರಿಗೆ ಹೊಸ ಅತಿಥಿಗಳ ಅಗಮನವಾಗಿದೆ. ಎರಡು ಗಂಡು ಮತ್ತು ಎರಡು ಹೆಣ್ಣು ಚಿತಾ ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದಿವೆ. ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಚೀತಾಗಳನ್ನು ವಿಮಾನ ನಿಲ್ದಾಣಕ್ಕೆ ತೆರಳಿ ಅರಣ್ಯ ಸಚಿವ ಈಶ್ವರ ಖಂಡ್ರೆ ಬರಮಾಡಿಕೊಂಡಿದ್ದಾರೆ. ಈ ಚೀತಾಗಳಿಗೆ ವಾತಾವರಣ, ಹವಾಮಾನ ಬದಲಾವಣೆಯಾಗುವ ಕಾರಣ, ಅವುಗಳಿಗೆ ಯಾವುದೇ ತೊಂದರೆ ಆಗದಂತೆ ಮತ್ತು ಆರೋಗ್ಯ ಸಮಸ್ಯೆ ಎದುರಾಗದ ರೀತಿಯಲ್ಲಿ ಸೂಕ್ತ ನಿಗಾ ಇಡಲು ಸೂಚನೆ ನೀಡಲಾಗಿದೆ.‌ ಒಂದು ಕಾಲದಲ್ಲಿ ಕರ್ನಾಟಕದ ಕಾಡುಗಳಲ್ಲಿಯೇ ಸಿವಂಗಿ ಎಂದು ಕರೆಸಿಕೊಳ್ಳುವ ಚೀತಾಗಳಿದ್ದವು. ಆದರೆ, ರಾಜ್ಯದ ಕಾಡಿನಲ್ಲಿ ಇವು ಈಗ ನಾಮಾವಶೇಷ. ಹೀಗಾಗಿ, ಮೃಗಾಲಯಗಳಲ್ಲಾದರೂ ಇವುಗಳನ್ನು ನೋಡಲು ಅವಕಾಶ ಆಗಬೇಕೆಂದು ಅರಣ್ಯ ಇಲಾಖೆ ಚೀತಾಗಳನ್ನು ತರಿಸಿದೆ. ಚೀತಾಗಳ ಸುರಕ್ಷತೆಗೆ ಆದ್ಯ ಗಮನ ನೀಡುವಂತೆ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನೀಲ್ ಪನ್ವಾರ್ ಅವರಿಗೆ ಸೂಚನೆ ನೀಡಲಾಗಿದೆ.  

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.