2026-04-24 02:51:48

New twist in the Muda scam | ಮುಡಾ ಹಗರಣಕ್ಕೆ ಹೊಸ ತಿರುವು: ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್ ತುರ್ತು ನೋಟಿಸ್ |Speed news kannada

New twist in the Muda scam | ಮುಡಾ ಹಗರಣಕ್ಕೆ ಹೊಸ ತಿರುವು: ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್ ತುರ್ತು ನೋಟಿಸ್ |Speed news kannada

ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ — ಮುಡಾ ನಿವೇಶನ ಹಂಚಿಕೆ ಹಗರಣ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರಿಗೆ ಕರ್ನಾಟಕ ಹೈಕೋರ್ಟ್ ತುರ್ತು ನೋಟಿಸ್ ಜಾರಿ ಮಾಡಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ‘ಬಿ’ ರಿಪೋರ್ಟ್‌ ವಿರುದ್ಧ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಹೈಕೋರ್ಟ್‌ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಸೇರಿದಂತೆ ಲೋಕಾಯುಕ್ತ ಪೊಲೀಸರು, ಜಾರಿ ನಿರ್ದೇಶನಾಲಯ, ಮಲ್ಲಿಕಾರ್ಜನಸ್ವಾಮಿ ಹಾಗೂ ದೇವರಾಜ ಅವರಿಗೆ ನೋಟಿಸ್ ಜಾರಿಗೊಳಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧದ ಮುಡಾ ಭೂ ಹಗರಣ ಪ್ರಕರಣದಲ್ಲಿ, ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ‘ಬಿ’ ರಿಪೋರ್ಟ್‌ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಒಪ್ಪಿಕೊಂಡಿತ್ತು. ಇದನ್ನು ಪ್ರಶ್ನಿಸಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದ್ದು, ಈ ಸಂಬಂಧ ಇದೀಗ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.