2026-07-23 06:15:01

Nigeria Road Accident | ನೈಜೀರಿಯಾದಲ್ಲಿ ಭೀಕರ ರಸ್ತೆ ಅಪಘಾತ ಪ್ರಯಾಣಿಕರ ಟ್ರಕ್ ಉರುಳಿ 30ಕ್ಕೂ ಹೆಚ್ಚು ಮಂದಿ ಸಾವು | Speed News Kannada

Nigeria Road Accident | ನೈಜೀರಿಯಾದಲ್ಲಿ ಭೀಕರ ರಸ್ತೆ ಅಪಘಾತ ಪ್ರಯಾಣಿಕರ ಟ್ರಕ್ ಉರುಳಿ 30ಕ್ಕೂ ಹೆಚ್ಚು ಮಂದಿ ಸಾವು | Speed News Kannada

ಕಾನೋ: ಉತ್ತರ ನೈಜೀರಿಯಾದ ಕಾನೋ ರಾಜ್ಯದಲ್ಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ನಿಯಂತ್ರಣ ತಪ್ಪಿ ಉರುಳಿದ ಪರಿಣಾಮ ಸುಮಾರು 30 ಮಂದಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಕಾನೋ ರಾಜ್ಯದ ಗೆಜಾವಾ ಪ್ರದೇಶದ ಕ್ಯಾನಾರ್ ಬಾರ್ಡೆ ಪಟ್ಟಣದ ಪ್ರಮುಖ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಅಧರೆರತಿಗಳ ಮಾಹಿತಿ ಪ್ರಕಾರ, ದೊಡ್ಡ ಟ್ರೇಲರ್ ಟ್ರಕ್ ಅತಿ ವೇಗದಲ್ಲಿ ಚಲಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಈ ಭೀಕರ ಅಪಘಾತ ಸಂಭವಿಸಿದೆ. ಟ್ರಕ್ ಕಾನೋ ನಗರದಿಂದ ಗುಜುಂಗು ಪಟ್ಟಣದ ಕಡೆಗೆ ಪ್ರಯಾಣಿಕರು ಹಾಗೂ ಸರಕುಗಳನ್ನು ಸಾಗಿಸುತ್ತಿತ್ತು. ಅಪಘಾತದ ವೇಳೆ ವಾಹನ ಉರುಳಿದ ಪರಿಣಾಮ ಅದರಲ್ಲಿದ್ದ ಅನೇಕ ಪ್ರಯಾಣಿಕರು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ.
ಈ ದುರ್ಘಟನೆಯಲ್ಲಿ ಹಲವರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೂ ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ರಾಜ್ಯದ ವಿವಿಧ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಕೆಲವು ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ, ಅಜಾಗರೂಕ ಮತ್ತು ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಪ್ರಮುಖ ಕಾರಣ ಎಂದು ಶಂಕಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ಅಪಘಾತದ ಕುರಿತು ಪ್ರತಿಕ್ರಿಯಿಸಿದ ಕಾನೋ ರಾಜ್ಯಪಾಲ ಅಬ್ಬಾ ಕಬೀರ್ ಯೂಸುಫ್, "ಈ ಘಟನೆ ಅತ್ಯಂತ ಹೃದಯವಿದ್ರಾವಕವಾಗಿದೆ. ಇದು ಸಂತ್ರಸ್ತ ಕುಟುಂಬಗಳಿಗೆ ಮಾತ್ರವಲ್ಲ, ಕಾನೋ ರಾಜ್ಯದ ಇಡೀ ಜನತೆಗೆ ದೊಡ್ಡ ನಷ್ಟ" ಎಂದು ಶೋಕ ವ್ಯಕ್ತಪಡಿಸಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.