2026-07-23 06:15:17

Nikhil Kumaraswamy hits back at actor Chethan non violence|ನಟ ಚೇತನ್‌ ಅಹಿಂಸಾಗೆ ನಿಖಿಲ್ ಕುಮಾರಸ್ವಾಮಿ ತಿರುಗೇಟು|Speed News Kannada

Nikhil Kumaraswamy hits back at actor Chethan non violence|ನಟ ಚೇತನ್‌ ಅಹಿಂಸಾಗೆ ನಿಖಿಲ್ ಕುಮಾರಸ್ವಾಮಿ ತಿರುಗೇಟು|Speed News Kannada

ಕನ್ನಡದ ಕಲಾ ಸಾಮ್ರಾಟ, ವರನಟ ಡಾ. ರಾಜ್‌ಕುಮಾರ್ ಅವರ ಕುರಿತು ನಟ ಚೇತನ್ ಅಹಿಂಸಾ ಮಾಡಿರುವ ವಿವಾದಾತ್ಮಕ ಹೇಳಿಕೆಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 'ಅಣ್ಣಾವ್ರು ಆರು ಕೋಟಿ ಕನ್ನಡಿಗರ ಭಾವನೆ. ಅವರ ಬಗ್ಗೆ ಹಗುರವಾಗಿ ಮಾತನಾಡುವುದು ಅಹಂಕಾರದ ಪರಮಾವಧಿ' ಎಂದು ನಿಖಿಲ್ ವಾಗ್ದಾಳಿ ನಡೆಸಿದ್ದಾರೆ.

ಚೇತನ್ ಅವರಿಗೆ ಇತಿಹಾಸದ ಅರಿವಿಲ್ಲ ಎಂದು ಟೀಕಿಸಿರುವ ಅವರು, 'ಗೋಕಾಕ್ ಚಳವಳಿಯ ಮೂಲಕ ಕನ್ನಡಕ್ಕೆ ಅಸ್ಮಿತೆ ತಂದುಕೊಟ್ಟ ಧೀಮಂತ ನಾಯಕರ ಬಗ್ಗೆ ಮಾತನಾಡುವ ಮುನ್ನ ಇತಿಹಾಸ ತಿಳಿದುಕೊಳ್ಳಿ' ಎಂದು ಸಲಹೆ ನೀಡಿದ್ದಾರೆ.ಸಾರ್ವಜನಿಕ ಜೀವನದಲ್ಲಿ ಟೀಕೆಗಳಿಗೆ ಘನತೆ ಇರಬೇಕು, ಪ್ರಚಾರದ ಹಪಾಹಪಿಯಿಂದ ದ್ವೇಷ ಬಿತ್ತುವ ಕೆಲಸ ಮಾಡಬೇಡಿ ಎಂದು ನಿಖಿಲ್ ಕುಮಾರಸ್ವಾಮಿ ಚೇತನ್ ಅಹಿಂಸಾಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.