ತುಮಕೂರು: ಜಿಲ್ಲೆಯ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ನಾಗವಲ್ಲಿ ಗ್ರಾಮದ ಗ್ರಾಮ ಪಂಚಾಯತಿ ಆವರಣದ ಮುಂಭಾಗದಲ್ಲಿ ಜನರೊಂದಿಗೆ ಜನತಾದಳ ಹಾಗೂ ಪಕ್ಷದ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ನಡೆಯಿತು.
ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಪಕ್ಷ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ
ಜನತಾದಳ ಜನಸಾಮಾನ್ಯರ ಹಾಗೂ ರೈತರ ಪಕ್ಷ ಪಕ್ಷ. ತುಮಕೂರು ಜಿಲ್ಲೆಯಲ್ಲಿ ಪಕ್ಷದ ಹಳೆಯ ಗತವೈಭವವನ್ನು ಮರುಕಳಿಸಲು ನಾವೆಲ್ಲರೂ ಸಂಘಟಿತರಾಗಿ ಪಕ್ಷದ ಬಲವರ್ಧನೆಗೆ ಶ್ರಮಿಸೋಣ ಎಂದು ಕರೆ ನೀಡಿದರು.
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಸಾಧನೆ ಹಾಗೂ ಕೊಡುಗೆಯನ್ನು ತುಮಕೂರು ಜನತೆಗೆ ತಿಳಿಸಿ, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಗಾಗಿ ಶ್ರಮಿಸೋಣ. ಆ ಮೂಲಕ 2028 ರ ಚುನಾವಣೆಗೆ ಸನ್ನದ್ದರಾಗೋಣ ಎಂದು ಹೇಳಿದರು.
ಎಲ್ಲ ಕ್ಷೇತ್ರಗಳಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ., ಶಿಕ್ಷಕರ ನೇಮಕಾತಿ ಆಗುತ್ತಿಲ್ಲ ಎಂದ ಅವರು, ಮುಂಬರುವ ದಿನಗಳಲ್ಲಿ ತುಮಕೂರು ಜಿಲ್ಲೆಯಲ್ಲಿ ಬೃಹತ್ ಸಮಾವೇಶ ಮಾಡುವ ನಡೆಸಿ 2028 ರ ಚುನಾವಣೆಗೆ ದಿನಾಂದಿ ಹಾಡೋಣ ಎಂದರು.
ಸಮಾರಂಭದಲ್ಲಿ ಮಾಜಿ ವಿಧಾನಪರಿಷತ್ ಸದಸ್ಯ ತಿಪ್ಪೇಸ್ವಾಮಿ, ತೂಪಲ್ಲಿ ಚೌಡರೆಡ್ಡಿ ಜಿಲ್ಲಾಧ್ಯಕ್ಷ ನಿಂಗಪ್ಪ, ಮಾಜಿ ಶಾಸಕ ತಿಮ್ಮರಾಯಪ್ಪ, ಶಿರಾ ಉಗ್ರೇಶ್ ಮೊದಲಾದವರು ಹಾಜರಿದ್ದರು.