2026-03-07 08:58:41

Nikhil Kumaraswamy | ತುಮಕೂರಿನಲ್ಲಿ ಪಕ್ಷದ ಗತವೈಭವ ಮರುಕಳಿಸಬೇಕು ನಿಖಿಲ್‌ ಕುಮಾರಸ್ವಾಮಿ | Speed News Kannaaaada

Nikhil Kumaraswamy | ತುಮಕೂರಿನಲ್ಲಿ ಪಕ್ಷದ ಗತವೈಭವ ಮರುಕಳಿಸಬೇಕು ನಿಖಿಲ್‌ ಕುಮಾರಸ್ವಾಮಿ | Speed News Kannaaaada

ತುಮಕೂರು: ಜಿಲ್ಲೆಯ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ನಾಗವಲ್ಲಿ ಗ್ರಾಮದ ಗ್ರಾಮ ಪಂಚಾಯತಿ ಆವರಣದ ಮುಂಭಾಗದಲ್ಲಿ ಜನರೊಂದಿಗೆ ಜನತಾದಳ ಹಾಗೂ ಪಕ್ಷದ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ನಡೆಯಿತು.
ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಪಕ್ಷ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ 
ಜನತಾದಳ ಜನಸಾಮಾನ್ಯರ ಹಾಗೂ ರೈತರ ಪಕ್ಷ ಪಕ್ಷ. ತುಮಕೂರು ಜಿಲ್ಲೆಯಲ್ಲಿ ಪಕ್ಷದ ಹಳೆಯ ಗತವೈಭವವನ್ನು ಮರುಕಳಿಸಲು ನಾವೆಲ್ಲರೂ ಸಂಘಟಿತರಾಗಿ ಪಕ್ಷದ ಬಲವರ್ಧನೆಗೆ ಶ್ರಮಿಸೋಣ ಎಂದು ಕರೆ ನೀಡಿದರು.
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಕೇಂದ್ರ ಸಚಿವ  ಕುಮಾರಸ್ವಾಮಿ ಅವರ ಸಾಧನೆ ಹಾಗೂ ಕೊಡುಗೆಯನ್ನು ತುಮಕೂರು ಜನತೆಗೆ ತಿಳಿಸಿ, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಗಾಗಿ ಶ್ರಮಿಸೋಣ. ಆ ಮೂಲಕ 2028 ರ ಚುನಾವಣೆಗೆ ಸನ್ನದ್ದರಾಗೋಣ ಎಂದು ಹೇಳಿದರು.
ಎಲ್ಲ ಕ್ಷೇತ್ರಗಳಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ., ಶಿಕ್ಷಕರ ನೇಮಕಾತಿ ಆಗುತ್ತಿಲ್ಲ ಎಂದ ಅವರು, ಮುಂಬರುವ ದಿನಗಳಲ್ಲಿ ತುಮಕೂರು ಜಿಲ್ಲೆಯಲ್ಲಿ ಬೃಹತ್ ಸಮಾವೇಶ ಮಾಡುವ ನಡೆಸಿ 2028 ರ ಚುನಾವಣೆಗೆ ದಿನಾಂದಿ ಹಾಡೋಣ ಎಂದರು.
ಸಮಾರಂಭದಲ್ಲಿ ಮಾಜಿ ವಿಧಾನಪರಿಷತ್ ಸದಸ್ಯ ತಿಪ್ಪೇಸ್ವಾಮಿ, ತೂಪಲ್ಲಿ ಚೌಡರೆಡ್ಡಿ ಜಿಲ್ಲಾಧ್ಯಕ್ಷ ನಿಂಗಪ್ಪ, ಮಾಜಿ ಶಾಸಕ ತಿಮ್ಮರಾಯಪ್ಪ, ಶಿರಾ ಉಗ್ರೇಶ್ ಮೊದಲಾದವರು ಹಾಜರಿದ್ದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.