2026-06-25 04:09:10

no bail to darshan for 1 year; why supreme court reject it?| ದರ್ಶನ್‌ ಗೆ ಇನ್ನೂ ಒಂದು ವರ್ಷ ಜೈಲೇ ಗತಿ; ಸುಪ್ರೀಂಕೋರ್ಟ್‌ಜಾಮೀನು ನಿರಾಕರಿಸಿದ್ದು ಏಕೆ? |Speed News Kannada

no bail to darshan for 1 year; why supreme court reject it?| ದರ್ಶನ್‌ ಗೆ ಇನ್ನೂ ಒಂದು ವರ್ಷ ಜೈಲೇ ಗತಿ; ಸುಪ್ರೀಂಕೋರ್ಟ್‌ಜಾಮೀನು ನಿರಾಕರಿಸಿದ್ದು ಏಕೆ? |Speed News Kannada

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಗೆ ಇನ್ನೂ ಒಂದು ವರ್ಷ ಜೈಲು ಶಿಕ್ಷೆ ಕಾಯಂ ಆಗಿದೆ. ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಸದ್ಯಕ್ಕೆ ಜಾಮೀನು ನೀಡಲು ನಿರಾಕರಿಸಿದೆ. ಈ ಮೂಲಕ ಹಿನ್ನೆಡೆ ಅನುಭವಿಸಿರುವ ಅವರು ಜೈಲಿನಲ್ಲಿಯೇ ಕಾಲ ಕಳೆಯಬೇಕಾದ ಅನಿವಾರ್ಯತೆ ಎದುರಾಗಿದೆ.

ವಿಚಾರಣೆ ವಿಳಂಬಕ್ಕೆ ಸುಪ್ರೀಂ ಕೋರ್ಟ್ ಗರಂ:

ಜಾಮೀನು ಅರ್ಜಿಯ ವಿಚಾರಣೆ ನಡೆಸುತ್ತಿದ್ದಾಗ ಸುಪ್ರೀಂಕೋರ್ಟ್ ಪೀಠವು ಪ್ರಕರಣದ ವಿಚಾರಣೆ ಮಂದಗತಿಯಲ್ಲಿ ಸಾಗುತ್ತಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಪ್ರಕರಣದಲ್ಲಿ ಒಟ್ಟು 272 ಸಾಕ್ಷಿಗಳಿದ್ದು, ಕಳೆದ 7 ತಿಂಗಳಲ್ಲಿ ಕೇವಲ 10 ಸಾಕ್ಷಿಗಳ ವಿಚಾರಣೆ ಮಾತ್ರ ನಡೆಸಿರುವುದಕ್ಕೆ ಗರಂ ಆಗಿದೆ. ಹೀಗೆ ವಿಚಾರಣೆ ನಡೆದರೆ ಪ್ರಕರಣ ಮುಕ್ತಾಯಗೊಳಿಸುವುದು ಯಾವಾಗ ಎಂದು ಪ್ರಶ್ನಿಸಿದೆ.

ಮುಂದಿನ ವರ್ಷ ಅಂದರೆ 2027ರ ಮೇ 15ರ ಒಳಗಾಗಿ ಈ ಪ್ರಕರಣದ ಸಂಪೂರ್ಣ ವಿಚಾರಣೆಯನ್ನು ಮುಗಿಸಬೇಕು ಮತ್ತು ಪ್ರತಿದಿನ ವಿಚಾರಣೆ ನಡೆಸಬೇಕು ಎಂದು ಸೂಚಿಸಿದೆ.

ಈ ಗಡುವಿನ ನಂತರವೇ ಸುಪ್ರೀಂಕೋರ್ಟ್‌ ಜಾಮೀನು ಅರ್ಜಿಯನ್ನು ಮರು ಪರಿಗಣಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ದರ್ಶನ್‌ ಗೆ ಸೌಲಭ್ಯ ಒದಗಿಸಿ:

ದರ್ಶನ್ ಗೆ ಜೈಲಿನಲ್ಲಿ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಒದಗಿಸುವಂತೆ ನ್ಯಾಯಾಲಯವು ಜೈಲು ಅಧೀಕ್ಷಕರಿಗೆ ಸೂಚನೆ ನೀಡಿದೆ. ‘ಬೇರೆ ವಿಚಾರಣಾಧೀನ ಕೈದಿಗಳಿಗೆ ಜೈಲಿನಲ್ಲಿ ಸಿಗುವ ಎಲ್ಲ ಸೌಲಭ್ಯಗಳು ದರ್ಶನ್‌ಗೂ ಸಿಗಬೇಕು. ಮೂಲಭೂತ ಅವಶ್ಯಕತೆಗಳನ್ನು ಒದಗಿಸುವುದು ಅಧಿಕಾರಿಯ ಕರ್ತವ್ಯ ಎಂದು ನ್ಯಾಯಾಲಯ ತಿಳಿಸಿದೆ.

ದರ್ಶನ್ ಅವರನ್ನು ಕ್ವಾರಂಟೈನ್ ಸೆಲ್‌ ನಿಂದ ಸಾಮಾನ್ಯ ಸೆಲ್‌ಗೆ ಸ್ಥಳಾಂತರಿಸುವ ಬಗ್ಗೆ ದರ್ಶನ್ ಪರ ವಕೀಲರು ಮನವಿ ಮಾಡಿದ್ದರು. ಆದರೆ, ಈ ಬಗ್ಗೆ ಸುಪ್ರೀಂಕೋರ್ಟ್ ಯಾವುದೇ ಆದೇಶ ನೀಡಿಲ್ಲ. ಹೀಗಾಗಿ ದರ್ಶನ್ ಕ್ವಾರಂಟೈನ್ ಸೆಲ್‌ನಲ್ಲೇ ಇರಬೇಕಾಗಿದೆ.

ಈ ಆದೇಶದಿಂದ ದರ್ಶನ್‌ ಅಭಿಮಾನಿಗಳಿಗೆ ನಿರಾಶೆಯಂತೂ ಆಗಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.