2026-05-27 11:19:59

ಸಿಎಂ ಬದಲಾವಣೆ; ಎಐಸಿಸಿ ಯಾವುದೇ ನಿರ್ಧಾರ ಮಾಡಿಲ್ಲ; ಸುರ್ಜೇವಾಲ ಸ್ಪಷ್ಟನೆ| Speed News Kannada

ಸಿಎಂ ಬದಲಾವಣೆ; ಎಐಸಿಸಿ ಯಾವುದೇ ನಿರ್ಧಾರ ಮಾಡಿಲ್ಲ; ಸುರ್ಜೇವಾಲ  ಸ್ಪಷ್ಟನೆ| Speed News Kannada

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಕುರಿತು ಹೈಕಮಾಂಡ್ ಸದ್ಯಕ್ಕೆ ಯಾವುದೇ ನಿರ್ಧಾರ ಕೈಗೊಂಡಿಲ್ಲ, ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಕಾಂಗ್ರೆಸ್‌ ಮುಖಂಡ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ಹೇಳಿದ್ದಾರೆ.

ಬೆಂಗಳೂರಿಗೆ ಇಂದು ಸಂಜೆ ಆಗಮಿಸಿದ ಅವರು ಮಾತನಾಡಿ, ನಾಯಕತ್ವ ಬದಲಾವಣೆ ಮಾಡಲು ಶಾಸಕಾಂಗ ಪಕ್ಷದ ಸಭೆಯನ್ನೇ ಕರೆದಿಲ್ಲ. ಸಿದ್ದರಾಮಯ್ಯನವರು, ಎರಡು ಬಾರಿಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಪ್ರತಿಪಕ್ಷ ನಾಯಕರಾಗಿ ಕೆಲಸ ನಿರ್ವಹಿಸಿದ್ದಾರೆ. ಡಿ.ಕೆ.ಶಿವಕುಮಾರ್ ಅವರೂ ಕೂಡ ಹಲವು ಸಿಎಂಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ. ಅವರು ಸಂಘಟನಾ ಚತುರರೂ ಹೌದು ಎಂದು ಸುರ್ಜೇವಾಲ ತಿಳಿಸಿದ್ದಾರೆ.

ಸುರ್ಜೇವಾಲ ಅವರ ಈ ಹೇಳಿಕೆ ಅಚ್ಚರಿ ಮೂಡಿಸಿದೆ.

ಅತ್ತ ದೆಹಲಿಯಲ್ಲೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಬಿರುಸಿನ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇಮದು ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ನಾಳೆ ಮುಂಜಾನೆ ಆಗಮಿಸಲಿರುವ ಅವರು, ಸಿಎಂ ಸಿದ್ದರಾಮಯ್ಯ ಆಯೋಜಿಸಿರುವ ಉಪಹಾರಕೂಟದಲ್ಲಿ ಭಾಗವಹಿಸಲಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.