no metro rail service on may17th in this line for short period| ಮೇ 17ರಂದು ಈ ಮಾರ್ಗದಲ್ಲಿ ನಮ್ಮ ಮೆಟ್ರೋ ರೈಲು ಸಂಚಾರ ತಾತ್ಕಾಲಿಕ ಸ್ಥಗಿತ |Speed News Kannada
6
2026-05-15 17:34:22
no metro rail service on may17th in this line for short period| ಮೇ 17ರಂದು ಈ ಮಾರ್ಗದಲ್ಲಿ ನಮ್ಮ ಮೆಟ್ರೋ ರೈಲು ಸಂಚಾರ ತಾತ್ಕಾಲಿಕ ಸ್ಥಗಿತ |Speed News Kannada
ಬೆಂಗಳೂರು: ಅಗತ್ಯ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆ ಮೇ 17ರಂದು ಭಾನುವಾರ ನೇರಳೆ ಮಾರ್ಗದ ಕೆಲವು ನಿಲ್ದಾಣಗಳ ನಡುವೆ ಬೆಳಗ್ಗೆ 2 ಗಂಟೆ ಕಾಲ ಮೆಟ್ರೋ ಸಂಚಾರ ಇರುವುದಿಲ್ಲ. ಈ ಸಂಬಂಧ ಬಿಎಂಆರ್ ಸಿಎಲ್ ಪ್ರಕಟಣೆ ನೀಡಿದೆ.
ನಾಡಪ್ರಭು ಕೆಂಪೇಗೌಡ ನಿಲ್ದಾಣ (ಮೆಜೆಸ್ಟಿಕ್) ಮತ್ತು ಸರ್. ಎಂ. ವಿಶ್ವೇಶ್ವರಯ್ಯ ಮೆಟ್ರೋ ನಿಲ್ದಾಣಗಳ (ಸೆಂಟ್ರಲ್ ಕಾಲೇಜ್) ನಡುವೆ ಅಗತ್ಯ ನಿರ್ವಹಣಾ ಕಾಮಗಾರಿ ನಡೆಯಲಿದೆ. ಈ ಕಾರಣದಿಂದಾಗಿ, ಭಾನುವಾರ ಬೆಳಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ (ಹೊಸಹಳ್ಳಿ) ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸಂಚಾರ ಇರುವುದಿಲ್ಲ ಎಂದು ತಿಳಿಸಿದೆ.
ಎಲ್ಲೆಲ್ಲಿ ಮೆಟ್ರೋ ಲಭ್ಯವಿರಲಿದೆ?:
ಸಾರ್ವಜನಿಕರ ಅನುಕೂಲಕ್ಕಾಗಿ ಬೆಳಗ್ಗೆ 7 ಗಂಟೆಯಿಂದ 9 ಗಂಟೆ ಅವಧಿಯಲ್ಲಿ ಕೆಳಕಂಡ ಮಾರ್ಗಗಳಲ್ಲಿ ಎಂದಿನಂತೆ ಮೆಟ್ರೋ ರೈಲುಗಳು ನಿಯಮಿತ ವೇಳಾಪಟ್ಟಿಯಂತೆ ಸಂಚರಿಸಲಿವೆ.
ಚಲ್ಲಘಟ್ಟ – ವಿಜಯನಗರ
ಎಂ.ಜಿ. ರಸ್ತೆ – ವೈಟ್ ಫೀಲ್ಡ್, ಕಾಡುಗೋಡಿ
ಮಾದಾವರ – ಸಿಲ್ಕ್ ಇನ್‌ಸ್ಟಿಟ್ಯೂಟ್
ಆರ್.ವಿ. ರಸ್ತೆ – ಬೊಮ್ಮಸಂದ್ರ
ಭಾನುವಾರ ಬೆಳಗ್ಗೆ 9 ಗಂಟೆಯ ನಂತರ ಹೊಸಹಳ್ಳಿ ಮತ್ತು ಕಬ್ಬನ್ ಪಾರ್ಕ್ ನಿಲ್ದಾಣಗಳ ನಡುವೆ ಹಾಗೂ ಸಂಪೂರ್ಣ ನೇರಳೆ ಮಾರ್ಗದಲ್ಲಿ ಮೆಟ್ರೋ ಸೇವೆಗಳು ಎಂದಿನಂತೆ ಪುನಃ ಆರಂಭಗೊಳ್ಳಲಿವೆ. ಪ್ರಯಾಣಿಕರು ಈ ತಾತ್ಕಾಲಿಕ ಸೇವಾ ವ್ಯತ್ಯಯವನ್ನು ಗಮನದಲ್ಲಿಟ್ಟುಕೊಂಡು, ತಮ್ಮ ಪ್ರಯಾಣವನ್ನು ಮುಂಚಿತವಾಗಿಯೇ ಯೋಜಿಸಿಕೊಳ್ಳುವಂತೆ ಬಿಎಂಆರ್‌ಸಿಎಲ್ ಮನವಿ ಮಾಡಿದೆ.
ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.