2026-06-08 01:20:22

no metro rail service on may17th in this line for short period| ಮೇ 17ರಂದು ಈ ಮಾರ್ಗದಲ್ಲಿ ನಮ್ಮ ಮೆಟ್ರೋ ರೈಲು ಸಂಚಾರ ತಾತ್ಕಾಲಿಕ ಸ್ಥಗಿತ |Speed News Kannada

no metro rail service on may17th in this line for short period| ಮೇ 17ರಂದು ಈ ಮಾರ್ಗದಲ್ಲಿ ನಮ್ಮ ಮೆಟ್ರೋ ರೈಲು ಸಂಚಾರ ತಾತ್ಕಾಲಿಕ ಸ್ಥಗಿತ |Speed News Kannada

ಬೆಂಗಳೂರು: ಅಗತ್ಯ ನಿರ್ವಹಣಾ ಕಾಮಗಾರಿಗಳ ಹಿನ್ನೆಲೆ ಮೇ​ 17ರಂದು ಭಾನುವಾರ ನೇರಳೆ ಮಾರ್ಗದ ಕೆಲವು ನಿಲ್ದಾಣಗಳ ನಡುವೆ ಬೆಳಗ್ಗೆ 2 ಗಂಟೆ ಕಾಲ ಮೆಟ್ರೋ ಸಂಚಾರ ಇರುವುದಿಲ್ಲ. ಈ ಸಂಬಂಧ ಬಿಎಂಆರ್‌ ಸಿಎಲ್‌ ಪ್ರಕಟಣೆ ನೀಡಿದೆ.

ನಾಡಪ್ರಭು ಕೆಂಪೇಗೌಡ ನಿಲ್ದಾಣ (ಮೆಜೆಸ್ಟಿಕ್) ಮತ್ತು ಸರ್. ಎಂ. ವಿಶ್ವೇಶ್ವರಯ್ಯ ಮೆಟ್ರೋ ನಿಲ್ದಾಣಗಳ (ಸೆಂಟ್ರಲ್ ಕಾಲೇಜ್) ನಡುವೆ ಅಗತ್ಯ ನಿರ್ವಹಣಾ ಕಾಮಗಾರಿ ನಡೆಯಲಿದೆ. ಈ ಕಾರಣದಿಂದಾಗಿ, ಭಾನುವಾರ ಬೆಳಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ನಿಲ್ದಾಣ (ಹೊಸಹಳ್ಳಿ) ಮತ್ತು ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸಂಚಾರ ಇರುವುದಿಲ್ಲ ಎಂದು ತಿಳಿಸಿದೆ.

ಎಲ್ಲೆಲ್ಲಿ ಮೆಟ್ರೋ ಲಭ್ಯವಿರಲಿದೆ?:

ಸಾರ್ವಜನಿಕರ ಅನುಕೂಲಕ್ಕಾಗಿ ಬೆಳಗ್ಗೆ 7 ಗಂಟೆಯಿಂದ 9 ಗಂಟೆ ಅವಧಿಯಲ್ಲಿ ಕೆಳಕಂಡ ಮಾರ್ಗಗಳಲ್ಲಿ ಎಂದಿನಂತೆ ಮೆಟ್ರೋ ರೈಲುಗಳು ನಿಯಮಿತ ವೇಳಾಪಟ್ಟಿಯಂತೆ ಸಂಚರಿಸಲಿವೆ.

  • ಚಲ್ಲಘಟ್ಟ – ವಿಜಯನಗರ
  • ಎಂ.ಜಿ. ರಸ್ತೆ – ವೈಟ್ ಫೀಲ್ಡ್, ಕಾಡುಗೋಡಿ
  • ಮಾದಾವರ – ಸಿಲ್ಕ್ ಇನ್‌ಸ್ಟಿಟ್ಯೂಟ್
  • ಆರ್.ವಿ. ರಸ್ತೆ – ಬೊಮ್ಮಸಂದ್ರ

ಭಾನುವಾರ ಬೆಳಗ್ಗೆ 9 ಗಂಟೆಯ ನಂತರ ಹೊಸಹಳ್ಳಿ ಮತ್ತು ಕಬ್ಬನ್ ಪಾರ್ಕ್ ನಿಲ್ದಾಣಗಳ ನಡುವೆ ಹಾಗೂ ಸಂಪೂರ್ಣ ನೇರಳೆ ಮಾರ್ಗದಲ್ಲಿ ಮೆಟ್ರೋ ಸೇವೆಗಳು ಎಂದಿನಂತೆ ಪುನಃ ಆರಂಭಗೊಳ್ಳಲಿವೆ. ಪ್ರಯಾಣಿಕರು ಈ ತಾತ್ಕಾಲಿಕ ಸೇವಾ ವ್ಯತ್ಯಯವನ್ನು ಗಮನದಲ್ಲಿಟ್ಟುಕೊಂಡು, ತಮ್ಮ ಪ್ರಯಾಣವನ್ನು ಮುಂಚಿತವಾಗಿಯೇ ಯೋಜಿಸಿಕೊಳ್ಳುವಂತೆ ಬಿಎಂಆರ್‌ಸಿಎಲ್ ಮನವಿ ಮಾಡಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.