2026-04-25 03:21:59

No money for Greater Bengaluru elections, GBA complains to Supreme Court | ಗ್ರೇಟರ್ ಬೆಂಗಳೂರು ಚುನಾವಣೆಗೆ ದುಡ್ಡಿಲ್ಲ, ಸುಪ್ರೀಂಗೆ GBA ಅಳಲು | Speed news kannada

No money for Greater Bengaluru elections, GBA complains to Supreme Court | ಗ್ರೇಟರ್ ಬೆಂಗಳೂರು ಚುನಾವಣೆಗೆ ದುಡ್ಡಿಲ್ಲ, ಸುಪ್ರೀಂಗೆ GBA ಅಳಲು | Speed news kannada

ರಾಜ್ಯ ರಾಜಧಾನಿಯ ಆಡಳಿತಾತ್ಮಕ ಬದಲಾವಣೆಯ ಬಳಿಕ ಕುತೂಹಲ ಕೆರಳಿಸಿದ್ದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮತ್ತು ಐದು ನಗರ ಪಾಲಿಕೆಗಳ ಚುನಾವಣೆಗೆ ಇದೀಗ ಅನಿಶ್ಚಿತತೆ ಮಸುಕಾಗಿದೆ. Supreme Court ನೀಡಿದ ಜೂನ್ 30ರ ಗಡುವಿನೊಳಗೆ ಚುನಾವಣೆ ನಡೆಸುವುದು ಸದ್ಯದ ಪರಿಸ್ಥಿತಿಯಲ್ಲಿ ಸಾಧ್ಯವಿಲ್ಲ ಎಂದು ಕರ್ನಾಟಕ ಚುನಾವಣಾ ಆಯೋಗ ನ್ಯಾಯಾಲಯಕ್ಕೆ ತಿಳಿಸಿದೆ. ರಾಜ್ಯದಲ್ಲಿ ನಡೆಯುತ್ತಿರುವ ಜನಗಣತಿ ಕಾರ್ಯವು ಮೇ 15ರೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಈ ಕಾರ್ಯದಲ್ಲಿ ಹೆಚ್ಚಿನ ಸರ್ಕಾರಿ ಸಿಬ್ಬಂದಿ ತೊಡಗಿರುವುದರಿಂದ ಚುನಾವಣಾ ಸಿದ್ಧತೆಗಳಿಗೆ ಅಗತ್ಯವಾದ ಮಾನವ ಸಂಪನ್ಮೂಲ ಒದಗಿಸುವುದು ಕಷ್ಟಕರವಾಗಿದೆ. ಈ ಹಿನ್ನೆಲೆಯಲ್ಲಿ, ಮೇ 15ರ ನಂತರವೇ ಐದು ಪಾಲಿಕೆಗಳ ಚುನಾವಣಾ ಪೂರ್ವಸಿದ್ಧತೆಗಳನ್ನು ಆರಂಭಿಸಲು ಆಯೋಗ ನಿರ್ಧರಿಸಿದೆ. ಇದಕ್ಕೂ ಮೊದಲು, ಬೆಂಗಳೂರು ನಗರ ಪಾಲಿಕೆ ಚುನಾವಣೆ ವಿಳಂಬವಾಗುತ್ತಿರುವ ಕುರಿತು 2026ರ ಜನವರಿ 12ರಂದು ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಜೂನ್ 30ರೊಳಗೆ ಕಡ್ಡಾಯವಾಗಿ ಚುನಾವಣೆಯನ್ನು ಪೂರ್ಣಗೊಳಿಸುವಂತೆ ಸ್ಪಷ್ಟ ನಿರ್ದೇಶನ ನೀಡಿತ್ತು. ಆದರೆ ತಾಂತ್ರಿಕ ಮತ್ತು ಆರ್ಥಿಕ ಅಡಚಣೆಗಳು ಆಯೋಗದ ಮುಂದಿರುವ ಪ್ರಮುಖ ಸವಾಲುಗಳಾಗಿವೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.