2026-05-07 07:24:02

no oppurtunity to write railway exam, krv anguished| ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ನಿರಾಕರಣೆ; ಕರ್ನಾಟಕ ರಕ್ಷಣಾ ವೇದಿಕೆ ಆಕ್ರೋಶ| Speed News Kannada

no oppurtunity to write railway exam, krv anguished| ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ನಿರಾಕರಣೆ; ಕರ್ನಾಟಕ ರಕ್ಷಣಾ ವೇದಿಕೆ ಆಕ್ರೋಶ| Speed News Kannada

ಬೆಂಗಳೂರು: ನೈರುತ್ಯ ರೈಲ್ವೆ ಪರೀಕ್ಷೆಯನ್ನು ಕನ್ನಡ ಬಾಷೆಯಲ್ಲಿ ಬರೆಯಲು ಅವಕಾಶ ನಿರಾಕರಿಸಿರುವುದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ ನಾರಾಯಣ ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೈರುತ್ಯ ರೈಲ್ವೆ ಇಲಾಖೆಯು ನಡೆಸುತ್ತಿರುವ ವಿವಿಧ ಹುದ್ದೆಗಳ ಮುಂಬಡ್ತಿ ಪರೀಕ್ಷೆಗಳಲ್ಲಿ ಕನ್ನಡ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗುತ್ತಿದೆ. ಈ ಹಿಂದೆ ಪ್ರತಿಭಟನೆಗಳ ನಂತರ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಆದರೂ ಇದೀಗ ಮತ್ತೆ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಪರೀಕ್ಷೆ ನಡೆಸಲು ರೈಲ್ವೆ ಮಂಡಳಿ ಮುಂದಾಗಿದೆ ಎಂದು ಅವರು ಕಿಡಿ ಕಾರಿದ್ದಾರೆ.

ಆಫೀಸ್‌‍ ಸೂಪರಿಂಟೆಂಡೆಂಟ್‌ ಸೇರಿದಂತೆ ಒಟ್ಟು 73 ಹುದ್ದೆಗಳ ಮುಂಬಡ್ತಿಗಾಗಿ ಪರೀಕ್ಷೆ ನಡೆಯುತ್ತಿದೆ. ಪರೀಕ್ಷೆಯಲ್ಲಿ ಕನ್ನಡಕ್ಕೆ ಅವಕಾಶ ನೀಡದಿದ್ದರೆ ರಾಜ್ಯದಲ್ಲಿ ಒಂದು ರೈಲನ್ನೂ ಓಡಲು ಬಿಡುವುದಿಲ್ಲ ಮತ್ತು ರಾಜ್ಯಾದ್ಯಂತ ರೈಲು ಸಂಚಾರ ಸ್ಥಗಿತಗೊಳಿಸುವುದಾಗಿ ಎಚ್ಚರಿಕೆ ನೀಡಿದರು.

ಕೇಂದ್ರ ಸರ್ಕಾರ ಹಾಗೂ ರೈಲ್ವೆ ಸಚಿವರು ಮಧ್ಯಪ್ರವೇಶ ಮಾಡಬೇಕೆಂದು ಒತ್ತಾಯಿಸಿದ ಅವರು, ರೈಲ್ವೆ ಪರೀಕ್ಷೆಗಳಲ್ಲಿ ತ್ರಿಭಾಷಾ ಸೂತ್ರದಡಿ ಕನ್ನಡ-ಇಂಗ್ಲಿಷ್‌-ಹಿಂದಿ ವ್ಯವಸ್ಥೆಯನ್ನು ಅಳವಡಿಸಲೇಬೇಕು. ಅಧಿಕಾರಿಗಳು ತಮ್ಮ ಸುತ್ತೋಲೆಯಲ್ಲಿನ ದೋಷ ಸರಿಪಡಿಸಿ ಕನ್ನಡದಲ್ಲಿ ಪರೀಕ್ಷೆ ನಡೆಸಲು ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿದರು. ಇತರ ಕನ್ನಡ ಪರ ಸಂಘಟನೆಗಳೂ ಇದೇ ಆಗ್ರಹ ಮಾಡಿವೆ.

 

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.