2026-07-23 08:16:27

Northeastern Division DCPs advice | ರೌಡಿ ಶೀಟರ್‌ಗಳ ಮೇಲೆ ಕಟ್ಟೆಚ್ಚರ ವಹಿಸಿ ಈಶಾನ್ಯ ವಿಭಾಗದ ಡಿಸಿಪಿ ಸೂಚನೆ | Speed News Kannada

Northeastern Division DCPs advice | ರೌಡಿ ಶೀಟರ್‌ಗಳ ಮೇಲೆ ಕಟ್ಟೆಚ್ಚರ ವಹಿಸಿ ಈಶಾನ್ಯ ವಿಭಾಗದ  ಡಿಸಿಪಿ ಸೂಚನೆ | Speed News Kannada

ಬೆಂಗಳೂರು: ನಗರ ಪೊಲೀಸ್ ಆಯುಕ್ತರ ಸೂಚನೆಯಂತೆ ಬೆಂಗಳೂರು ನಗರ ಪೊಲೀಸ್ ವತಿಯಿಂದ ಈಶಾನ್ಯ ವಿಭಾಗದ  ಎಲ್ಲಾ ACP, PI, PSI ಹಾಗೂ CMC ಸಿಬ್ಬಂದಿಗಳ ಸಭೆ ನಡೆಸಲಾಯಿತು.  ಈ ಸಭೆಯಲ್ಲಿ ತನಿಖಾ ಹಂತದಲ್ಲಿರುವ ಎಲ್ಲಾ ಪ್ರಕರಣಗಳನ್ನು ನಿಗದಿತ ಕಾಲಮಿತಿಯೊಳಗೆ ಗುಣಮಟ್ಟಯುತ ತನಿಖೆಯೊಂದಿಗೆ ಶೀಘ್ರವಾಗಿ ಪೂರ್ಣಗೊಳಿಸುವ ಅಗತ್ಯತೆಯ ಕುರಿತು ಸವಿಸ್ತಾರವಾಗಿ ಚರ್ಚಿಸಿ ಅಗತ್ಯ ನಿರ್ದೇಶನಗಳನ್ನು ನೀಡಲಾಯಿತು.
ನ್ಯಾಯಾಲಯದ ಕಾರ್ಯವಿಧಾನಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಹಾಗೂ ಸುಗಮವಾಗಿ ನಡೆಸುವ ಉದ್ದೇಶದಿಂದ ಇ-ಸಮ್ಮನ್ಸ್ (e-Summons) ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಮತ್ತು ಕಡ್ಡಾಯವಾಗಿ ಅನುಷ್ಠಾನಗೊಳಿಸುವಂತೆ ಸಿಬ್ಬಂದಿಗೆ ಮಾರ್ಗದರ್ಶನ ನೀಡಲಾಯಿತು.
ರೌಡಿ ಶೀಟರ್‌ಗಳು ಹಾಗೂ ಬ್ಯಾಡ್ ಕ್ಯಾರೆಕ್ಟರ್‌ಗಳ ಚಟುವಟಿಕೆಗಳ ಮೇಲೆ ನಿರಂತರ ಮತ್ತು ನಿಕಟ ನಿಗಾವಹಿಸುವಂತೆ ಸೂಚನೆ ನೀಡಲಾಗಿದ್ದು, ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಯಿತು.
ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ವ್ಯಕ್ತಿಗಳ ವಿರುದ್ಧ PAR ಕ್ರಮಗಳನ್ನು ಜಾರಿಗೊಳಿಸುವುದು ಮತ್ತು ಅಗತ್ಯವಿದ್ದಲ್ಲಿ ಗೂಂಡಾ ಕಾಯ್ದೆ, ಗಡಿಪಾರು ಕ್ರಮ ಕೈಗೊಳ್ಳುವ ಕುರಿತು ಸ್ಪಷ್ಟ ಸೂಚನೆಗಳನ್ನು ನೀಡಲಾಯಿತು.
ಸಾರ್ವಜನಿಕರೊಂದಿಗೆ ನೇರ ಸಂಪರ್ಕವನ್ನು ಬಲಪಡಿಸುವ ಉದ್ದೇಶದಿಂದ ಮನೆ ಮನೆ ಪೊಲೀಸ್ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು ಹಾಗೂ ಪ್ರತಿಯೊಂದು ಸಬ್ ಬೀಟ್ ವ್ಯಾಪ್ತಿಯಲ್ಲಿ ನಿಯಮಿತವಾಗಿ ಸಬ್ ಬೀಟ್ ಸಭೆಗಳನ್ನು ನಡೆಸುವಂತೆ ತಿಳಿಸಲಾಯಿತು.
ಸಭೆಯ ಅಂತ್ಯದಲ್ಲಿ, ಸಾರ್ವಜನಿಕ ಸುರಕ್ಷತೆ, ಕಾನೂನು ಸುವ್ಯವಸ್ಥೆ ಹಾಗೂ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ದೃಷ್ಟಿಯಿಂದ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪರಸ್ಪರ ಸಮನ್ವಯದಿಂದ ಹಾಗೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕೆಂದು ತಿಳಿಸಲಾಯಿತು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.