2026-04-24 01:42:59

Nuwa Thushara takes to court for RCB|ಆರ್‌ಸಿಬಿಗಾಗಿ ಕೋರ್ಟ್‌ ಮೆಟ್ಟಿಲೇರಿದ ನುವಾನ್‌ ತುಷಾರ|Speed News Kannada

Nuwa Thushara takes to court for RCB|ಆರ್‌ಸಿಬಿಗಾಗಿ ಕೋರ್ಟ್‌ ಮೆಟ್ಟಿಲೇರಿದ ನುವಾನ್‌ ತುಷಾರ|Speed News Kannada

ಆರ್‌ಸಿಬಿ ತಂಡದ ಶ್ರೀಲಂಕಾದ ವೇಗದ ಬೌಲರ್‌ ನುವಾನ್‌ ತುಷಾರ ಕೋರ್ಟ್‌ ಮೆಟ್ಟಿಲೇರಿದ್ದಾರೆ. ಶ್ರೀಲಂಕಾ ತಂಡದ ಸ್ಟಾರ್ ವೇಗದ ಬೌಲರ್ ನುವಾನ್ ತುಷಾರಗೆ ಮಾತ್ರ ಐಪಿಎಲ್‌ನಲ್ಲಿ ಆಡುವ ಅವಕಾಶ ಸಿಕ್ಕಿಲ್ಲ. ಆರ್‌ಸಿಬಿಯ ಫಿಟ್‌ನೆಸ್‌ ಪರೀಕ್ಷೆಯಲ್ಲಿ ಪಾಸಾಗದ ಹಿನ್ನಲೆ ನುವಾನ್‌ ತುಷಾರಗೆ ಶ್ರೀಲಂಕಾ ಕ್ರಿಕೆಟ್‌ ಮಂಡಳಿ ಎನ್‌ಒಸಿ ನೀಡಲು ನಿರಾಕರಿಸಿದೆ. ಹೀಗಾಗಿ ಅವರು ಐಪಿಎಲ್‌ನಲ್ಲಿ ಆಡಲು ಸಾಧ್ಯವಾಗುತ್ತಿಲ್ಲ. ಇದರಿಂದ ಕೆರಳಿರುವ ತುಷಾರ, ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದಾರೆ. ಫಿಟ್‌ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಆಟಗಾರರಿಗೆ ಮಾತ್ರ ವಿದೇಶಿ ಲೀಗ್‌ಗಳಲ್ಲಿ ಆಡಬಹುದು ಎಂಬ ಶ್ರೀಲಂಕಾ ಮಂಡಳಿಯ ನಿಯಮ ನುವಾನ್ ತುಷಾರಗೆ ಮುಳುವಾಗಿದೆ. ಐಪಿಎಲ್ನಲ್ಲಿ ಆಡಲು ನಾನಾ ಕಸರತ್ತುಗಳನ್ನು ಮಾಡುತ್ತಿರುವ ನುವಾನ್ ತುಷಾರ ಈಗ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದು, ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಟ್ನೆಸ್ ಸಮಸ್ಯೆಗಳನ್ನು ಉಲ್ಲೇಖಿಸಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯು ನನಗೆ NOC ನೀಡುತ್ತಿಲ್ಲ. ಈ ನಿರ್ಧಾರದಿಂದ ನನಗೆ 1.6 ಕೋಟಿ ನಷ್ಟವಾಗುತ್ತಿದೆ ಎಂದು ತುಷಾರ ಮಂಡಳಿ ವಿರುದ್ಧ ಆರೋಪ ಹೊರಿಸಿದ್ದಾರೆ

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.