ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ 2.30ಕ್ಕೆ ಲೋಕ ಭವನಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ 3 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಭವನಕ್ಕೆ ತೆರಳಿ ರಾಜೀನಾಮೆ ನೀಡಲಿದ್ದಾರೆ. ಈ ಮೂಲಕ ಡಿಕೆ ಶಿವಕುಮಾರ್ ಹಾದಿ ಸುಗಮವಾಗಲಿದೆ.ನಂತರ ಅವರು ದೆಹಲಿಗೆ ತೆರಳಲಿದ್ದಾರೆ ಎಂದು ತಿಳಿದು ಬಂದಿದೆ.
ಉಪಹಾರ ಸಭೆ ಮುಗಿದು ಎಲ್ಲ ಸಚಿವರೂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಿಂದ ನಿರ್ಗಮಿಸಿದ್ದಾರೆ. ಆದರೆ ಡಿಸಿಎಂ ಶಿವಕುಮಾರ್ ಮಾತ್ರ ಇನ್ನೂ ಸಿದ್ದರಾಮಯ್ಯ ಅವರೊಂದಿಗೆ ಗುಪ್ತ ಸಮಾಲೋಚನೆಯಲ್ಲಿ ತೊಡಗಿದ್ದಾರೆ.