2026-06-08 01:28:19

ಸಿಎಂ ಸಿದ್ದರಾಮಯ್ಯ ಮಧ್ಯಾಹ್ನ 2.30ಕ್ಕೆ ರಾಜೀನಾಮೆ ಸಲ್ಲಿಕೆ |Speed News Kannada

ಸಿಎಂ ಸಿದ್ದರಾಮಯ್ಯ ಮಧ್ಯಾಹ್ನ 2.30ಕ್ಕೆ ರಾಜೀನಾಮೆ ಸಲ್ಲಿಕೆ |Speed News Kannada

 

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ 2.30ಕ್ಕೆ ಲೋಕ ಭವನಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ 3 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಲಿದ್ದಾರೆ. ಲೋಕಭವನಕ್ಕೆ ತೆರಳಿ ರಾಜೀನಾಮೆ ನೀಡಲಿದ್ದಾರೆ. ಈ ಮೂಲಕ ಡಿಕೆ ಶಿವಕುಮಾರ್‌ ಹಾದಿ ಸುಗಮವಾಗಲಿದೆ.ನಂತರ ಅವರು ದೆಹಲಿಗೆ ತೆರಳಲಿದ್ದಾರೆ ಎಂದು ತಿಳಿದು ಬಂದಿದೆ.

ಉಪಹಾರ ಸಭೆ ಮುಗಿದು ಎಲ್ಲ ಸಚಿವರೂ ಸಿದ್ದರಾಮಯ್ಯ ಅವರ ಕಾವೇರಿ  ನಿವಾಸದಿಂದ ನಿರ್ಗಮಿಸಿದ್ದಾರೆ. ಆದರೆ ಡಿಸಿಎಂ ಶಿವಕುಮಾರ್‌ ಮಾತ್ರ ಇನ್ನೂ ಸಿದ್ದರಾಮಯ್ಯ ಅವರೊಂದಿಗೆ ಗುಪ್ತ ಸಮಾಲೋಚನೆಯಲ್ಲಿ ತೊಡಗಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.