ನವದೆಹಲಿ: ಹಾರ್ಮುಜ್ ಜಲಸಂಧಿ ಮಾರ್ಗದಲ್ಲಿ ಕಚ್ಚಾ ತೈಲದ ಸಾಗಾಣಿಕೆಗೆ ಇರಾನ್ ನಿರ್ಭಂಧ ಹಾಕಿದೆ. ಇದು ಭಾರತಕ್ಕೆ ಸಂಕಷ್ಟವನ್ನು ತಂದೊಡ್ಡಿದ್ದು, ಇರಾನ್ ನಾಯಕರೊಂದಿಗೆ ಸಂಪರ್ಕ ಸಾಧಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಭಾರತೀಯ ವಿದೇಶಾಂಗ ಸಚಿವ ಎಸ್. ಜೈಶಂಕರ್ ರಾಜ್ಯಸಭೆಗೆ ತಿಳಿಸಿದ್ದಾರೆ.
ಅವರು ಇರಾನ್ -ಅಮೆರಿಕ ಇಸ್ರೇಲ್ ಯುದ್ಧ ಕುರಿತು ಹೇಳಿಕೆ ನೀಡಿದರು.
ಕೇಂದ್ರ ಸರ್ಕಾರವು ಕೊಲ್ಲಿಯಲ್ಲಿರುವ ಭಾರತೀಯರೊಂದಿಗೆ ನಿರಂತರ ಸಂಪರ್ಕದಲ್ಲಿದೆ ಮತ್ತು ಟೆಹರಾನ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿದೆ. ಸಂಘರ್ಷದ ನಡುವೆ ಸಿಲುಕಿರುವ ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತದೆ ಎಂದು ತಿಳಿಸಿದ್ದಾರೆ.
ಪ್ರಧಾನಿ ಮೋದಿ ಅವರು ಈ ಬೆಳವಣಿಗೆಗಳನ್ನು ತುಂಬ ನಿಕಟವಾಗಿ ಪರಿಶೀಳಿಸುತ್ತಿದ್ದಾರೆ ಮತ್ತು ಸಂಬಂಧಪಟ್ಟ ಸಚಿವರು ನಿರಂತರವಾಗಿ ಪರಿಶೀಲನೆ ನಡೆಸುತ್ತಿದ್ದಾರೆ.
ಭಾರತ ರಾಯಭಾರ ಕಚೇರಿ ಈಗಾಗಲೇ ಹಲವಾರು ವಿದ್ಯಾರ್ಥಿಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲು ಸಹಾಯ ಮಾಡಿದೆ. ಕತಾರ್ ಮತ್ತು ಜೋರ್ಡಾನ್ ನಂತಹ ದೇಶಗಳಲ್ಲಿ ಸಿಲುಕಿರುವ ಭಾರತೀಯರಿಗೆ ಸಹಾಯ ಮಾಡಲು ಮತ್ತು ಅವರನ್ನು ಸುರಕ್ಷಿತವಾಗಿ ಮರಳಿ ಕರೆತರಲು ಎಲ್ಲ ಪ್ರಯತ್ನಗಳನ್ನು ಮಾಡಲಾಗುತ್ತಿದೆ.
ಇರಾನ್ ನೌಕಾಪಡೆಯ ಐಆರ್‍ಐಎಸ್ ಲವಣ್ ಗೆ ಆಶ್ರಯ ನೀಡಿದ್ದಕ್ಕಾಗಿ ಭಾರತಕ್ಕೆ ಧನ್ಯವಾದ ಇರಾನ್ ಧನ್ಯವಾದ ಹೇಳಿದೆ. ಶ್ರೀಲಂಕಾದ ಕರಾವಳಿಯಲ್ಲಿ ಅಮೆರಿಕದ ಮಿಲಿಟರಿ ಪಡೆಗಳು ಇರಾನ್ ನ ಐಆರ್‍ಐಎಸ್ ದೇನಾ ಹಡಗಿನ ಮೇಲೆ ದಾಳಿ ಮಾಡಿತ್ತು. ಈ ದಾಳಿಯಲ್ಲಿ ಇರಾನ್‌ನ 87 ಜನ ಸೈನಿಕರು ಮತಪಟ್ಟಿದ್ದರು. ನಂತರ ಇರಾನ್ ಸೇನೆಗೆ ಭಾರತವು ಆಶ್ರಯ ನೀಡಿತ್ತು.
ಉದ್ವಿಗ್ನತೆಯನ್ನು ಕಡಿಮೆ ಮಾಡಲು ಸಂವಾದ ಮತ್ತು ರಾಜತಾಂತ್ರಿಕತೆಯನ್ನು ಅನುಸರಿಸಬೇಕು ಎಂದು ನಾವು ಬಲವಾಗಿ ನಂಬುತ್ತೇವೆ ಎಂದೂ ಹೇಳಿದ್ದಾರೆ