2026-03-07 06:07:06

Om Birlas Shocking Statement | ಪ್ರಧಾನಿ ಮೋದಿಗೆ ಸದನಕ್ಕೆ ಗೈರಾಗಲು ನಾನೇ ಸೂಚಿಸಿದ್ದೆ ಓಂ ಬಿರ್ಲಾ ಶಾಕಿಂಗ್‌ ಹೇಳಿಕೆ! | Speed News Kannada

Om Birlas Shocking Statement | ಪ್ರಧಾನಿ ಮೋದಿಗೆ ಸದನಕ್ಕೆ ಗೈರಾಗಲು ನಾನೇ ಸೂಚಿಸಿದ್ದೆ ಓಂ ಬಿರ್ಲಾ ಶಾಕಿಂಗ್‌ ಹೇಳಿಕೆ! | Speed News Kannada

ಲೋಕಸಭಾ ಅಧಿವೇಶನದಲ್ಲಿ ನಿನ್ನೆ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಪತಿಗಳ ಭಾಷಣಕ್ಕೆ ಉತ್ತರವಾಗಿ ಭಾಷಣ ಮಾಡಬೇಕಿತ್ತು. ಆದರೆ, ಅವರು ನಿನ್ನೆ ಸದನಕ್ಕೆ ಗೈರುಹಾಜರಾಗಿದ್ದರು. ಸಂಜೆ ಪ್ರಧಾನಿ ಮೊದಿಯವರ ಭಾಷಣ ಸಮಯ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಪಕ್ಷದ ಮಹಿಳಾ ಸಂಸದರು ಪ್ರಧಾನಿಯ ಕುರ್ಚಿಗೆ ಮುತ್ತಿಗೆ ಹಾಕಿ ಗದ್ದಲ ಎಬ್ಬಿಸಿದ್ದರು. ಕಾಂಗ್ರೆಸ್ ಪಕ್ಷದ ಕೆಲವು ಸದಸ್ಯರು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ 'ಅನಿರೀಕ್ಷಿತ ಕೃತ್ಯ' ಎಸಗಲು ಯೋಜನೆ ರೂಪಿಸಿದ್ದರು ಎಂಬ ಮಾಹಿತಿ ನನಗೆ ಲಭಿಸಿತ್ತು ಹೀಗಾಗಿ ನಾನೇ ಅವರಿಗೆ ಸದನಕ್ಕೆ ಹಾಜರಾಗದಂತೆ ಸಲಹೆ ನೀಡಿದ್ದಾಗಿ ಸ್ಪೀಕರ್ ಓಂ ಬಿರ್ಲಾ ಅವರು ಅಚ್ಚರಿಯ ಆರೋಪ ಮಾಡಿದ್ದಾರೆ. 

“ಕಾಂಗ್ರೆಸ್ ಸಂಸದರು ಅಧಿವೇಶನದಲ್ಲಿ ಏನೋ ಮಾಡಲು ಪ್ಲಾನ್ ಮಾಡಿದ್ದರು ಎಂಬ ಮಾಹಿತಿ ನನಗೆ ಸಿಕ್ಕಿತ್ತು. ಹೀಗಾಗಿಯೇ ನಿನ್ನೆಯ ಅಧಿವೇಶನಕ್ಕೆ ಬಾರದಂತೆ ಮತ್ತು ಕಲಾಪವನ್ನು ಉದ್ದೇಶಿಸಿ ಭಾಷಣ ಮಾಡದಂತೆ ನಾನೇ ಪ್ರಧಾನಿ ಮೋದಿಯವರಿಗೆ ಸಲಹೆ ನೀಡಿದ್ದೆ” ಎಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ. 
ಬುಧವಾರ ಅಧಿವೇಶನದಲ್ಲಿ ನಡೆದ ಗದ್ದಲದ ಬಗ್ಗೆ ಬೇಸರ ವ್ಯಕ್ತಪಡಿಸಿದ ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ವಿರೋಧ ಪಕ್ಷದ ಸದಸ್ಯರು ಪ್ರಧಾನಮಂತ್ರಿಗಳ ಕುರ್ಚಿಯನ್ನು ಸುತ್ತುವರೆದಿದ್ದರಿಂದ ಭದ್ರತಾ ಕಾರಣದಿಂದ ಪ್ರಧಾನಿ ಮೋದಿಯವರಿಗೆ ಲೋಕಸಭೆಗೆ ಬರದಂತೆ ನಾನೇ ಸಲಹೆ ನೀಡಿದ್ದೆ ಎಂದು ಹೇಳಿದ್ದಾರೆ.. 

ಲೋಕಸಭೆ ಕಲಾಪಕ್ಕೆ ಹಾಜರಾಗದಿದ್ದಕ್ಕಾಗಿ ಪ್ರಧಾನಿ ಮೋದಿಯವರಿಗೆ ಧನ್ಯವಾದ ಹೇಳಿದ ಸ್ಪೀಕರ್, ಅಂತಹ ಘಟನೆ ನಡೆದಿದ್ದರೆ, ಅದು ದೇಶದ ಪ್ರಜಾಪ್ರಭುತ್ವ ಪರಂಪರೆಗೆ ಕಪ್ಪುಚುಕ್ಕೆಯಾಗುತ್ತಿತ್ತು. ಅದನ್ನು ತಪ್ಪಿಸುವ ಸಲುವಾಗಿಯೇ ನಾನು ಈ ನಿರ್ಧಾರಕ್ಕೆ ಬಂದೆ ಎಂದು ಸ್ಪೀಕರ್ ಹೇಳಿದ್ದಾರೆ. 

ಆದರೆ ಈ ಆರೋಪವನ್ನು ಕಾಂಗ್ರೆಸ್ ಸ್ಪಷ್ಟವಾಗಿ ನಿರಾಕರಿಸಿದ್ದು. ಸರ್ಕಾರವು ವಿರೋಧ ಪಕ್ಷದ ಬಗ್ಗೆ ತಪ್ಪು ಕಲ್ಪನೆ ಬರುವಂತೆ ವರದಿಗಳನ್ನು ಹಬ್ಬಿಸುತ್ತಿದೆ ಎಂದು ಪ್ರತ್ಯಾರೋಪ ಮಾಡಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.