2026-06-08 03:28:04

once again ex pm hd devegowda to rajyasbha?;kumaraswamy met nitin naveen| ಮತ್ತೊಂದು ಅವಧಿಗೆ ರಾಜ್ಯಸಭೆಗೆ ಮಾಜಿ ಪ್ರಧಾನಿ ದೇವೇಗೌಡರು?:ನಿತಿನ್‌ ಭೇಟಿಯಾದ ಕುಮಾರಸ್ವಾಮಿ |Speed News Kannada

once again ex pm hd devegowda to rajyasbha?;kumaraswamy met nitin naveen| ಮತ್ತೊಂದು ಅವಧಿಗೆ ರಾಜ್ಯಸಭೆಗೆ ಮಾಜಿ ಪ್ರಧಾನಿ ದೇವೇಗೌಡರು?:ನಿತಿನ್‌ ಭೇಟಿಯಾದ ಕುಮಾರಸ್ವಾಮಿ |Speed News Kannada

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಮತ್ತೊಂದು ಅವಧಿಗೆ ರಾಜ್ಯಸಭೆ ಪ್ರವೇಶಿಸಲು ಪ್ರಯತ್ನ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಅವರ ಪುತ್ರ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿ ಮನವೊಲಿಸುವ ಕೆಲಸ ಮಾಡುತ್ತಿದ್ದಾರೆ. ನಿನ್ನೆಯೂ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನವೀನ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

93 ವರ್ಷದ ದೇವೇಗೌಡರು ಮತ್ತೊಂದು ಅವಧಿಗೆ ರಾಜ್ಯಸಭೆ ಪ್ರವೇಶಿಸಲು ಬಯಸಿರುವುದು ಅಚ್ಚರಿ ಮೂಡಿಸಿದೆ.

ರಾಜ್ಯದಲ್ಲಿ ದೇವೇಗೌಡರೂ ಸೇರಿ ನಾಲ್ವರು ರಾಜ್ಯಸಭಾ ಸದಸ್ಯರು ಜೂನ್‌ನಲ್ಲಿ ನಿವೃತ್ತಿಯಾಗಲಿದ್ದಾರೆ. ಆದರೆ, ಜೆಡಿಎಸ್‌ ಬಲಿ ಅಗತ್ಯ ಸಂಖ್ಯಾಬಲ ಇಲ್ಲ. ಕಾಂಗ್ರೆಸ್ ಮೂರು ಸ್ಥಾನಗಳನ್ನು ಸುಲಭವಾಗಿ ಗೆಲ್ಲಲಿದೆ. ಮತ್ತೊಂದು  ಸ್ಥಾನವನ್ನು ಬಿಜೆಪಿ ಗೆಲ್ಲಲಿದೆ. ದೇವೇಗೌಡರು ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್‌ ಶಾ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು, ಅವಕಾಶ ಸಿಕ್ಕರೂ ಸಿಗಬಹುದು ಎಂದು ಜೆಡಿಎಸ್‌ ಮುಖಂಡರೊಬ್ಬರು ಅಭಿಪ್ರಾಯಪಡುತ್ತಾರೆ.

ಆದರೆ ಈ ಸ್ಥಾನವನ್ನು ಜೆಡಿಎಸ್‌ ಬಿಟ್ಟುಕೊಡುವುದಕ್ಕೆ ರಾಜ್ಯ ಬಿಜೆಪಿ ಮುಖಂಡರು ಒಪ್ಪುತ್ತಿಲ್ಲ. ಜೆಡಿಎಸ್‌ ಗೆ ಬಿಟ್ಟುಕೊಡುವ ಬದಲು ಪಕ್ಷದ ಓರ್ವ ನಿಷ್ಠಾವಂತ ಕಾರ್ಯಕರ್ತರಿಗೆ ಅವಕಾಶ ನೀಡಬಹುದು ಎನ್ನುವುದು ಅವರ ವಾದ.

 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.