2026-06-08 01:19:48

ರಾಜ್ಯದಾದ್ಯಂತ ಒಂದು ವಾರ ಬಿರುಗಾಳಿ ಸಹಿತ ಜೋರು ಮಳೆ: ಹವಾಮಾನ ಇಲಾಖೆ ಮುನ್ಸೂಚನೆ | Speed News Kannada

ರಾಜ್ಯದಾದ್ಯಂತ ಒಂದು ವಾರ ಬಿರುಗಾಳಿ ಸಹಿತ ಜೋರು ಮಳೆ: ಹವಾಮಾನ ಇಲಾಖೆ ಮುನ್ಸೂಚನೆ | Speed News Kannada

ಬೆಂಗಳೂರು: ರಾಜ್ಯದಾದ್ಯಂತ ಮುಂದಿನ ಒಂದು ವಾರ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಬಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 24ರಿಂದ 30ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದ್ದು ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಮೇ 24ರಂದು ಯಾದಗಿರಿ, ರಾಯಚೂರು, ಬಾಗಲಕೋಟೆ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ರಾಮನಗರ, ಚಾಮರಾಜನಗರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಗಾಳಿ ಸಹಿತ ಮಳೆಯಾಗಲಿದೆ. ಬಾಗಲಕೋಟೆ, ಗದಗ, ಧಾರವಾಡದಲ್ಲಿ ಆಲಿಕಲ್ಲು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮೇ 25ರಂದು ಅಲ್ಲಲ್ಲಿ ಆಲಿಕಲ್ಲು ಮಳೆಯಾಗುವ ಮುನ್ಸೂಚನೆ ಇದೆ ಎಂದು ಇಲಾಖೆ ತಿಳಿಸಿದೆ.

 

 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.