2026-06-08 01:33:18

one year to operation sindhoor; video shared by indian army| “ಆಪರೇಷನ್‌ ಸಿಂಧೂರ”ಕ್ಕೆ ಒಂದು ವರ್ಷ: ವಿಡಿಯೋ ಹಂಚಿಕೊಂಡ ಭಾರತೀಯ ಸೇನೆ| Speed News Kannada

one year to operation sindhoor; video shared by indian army| “ಆಪರೇಷನ್‌ ಸಿಂಧೂರ”ಕ್ಕೆ ಒಂದು ವರ್ಷ: ವಿಡಿಯೋ ಹಂಚಿಕೊಂಡ ಭಾರತೀಯ ಸೇನೆ| Speed News Kannada

ನವದೆಹಲಿ: ಭಾರತೀಯ ಸೇನೆ ಪಾಕಿಸ್ತಾನದ ವಿರುದ್ಧ ನಡೆಸಿದ ಐತಿಹಾಸಿಕ ಆಪರೇಷನ್‌ ಸಿಂಧೂರ ಕಾರ್ಯಾಚರಣೆಗೆ ಒಂದು ವರ್ಷ. ಇದರ ಅಂಗವಾಗಿ ಭಾರತೀಯ ಸೇನೆಯು ಅಂದಿನ ಭೀಕರ ಕಾರ್ಯಾಚರಣೆಯ ವಿಶೇಷ ವೀಡಿಯೊವೊಂದನ್ನು ಹಂಚಿಕೊಂಡಿದೆ.

ಪಾಕಿಸ್ತಾನದ ರಾವಲ್ಪಿಂಡಿಯಲ್ಲಿ ಅಡಗಿದ್ದ ಉಗ್ರರು ಮತ್ತು ಅವರಿಗೆ ಬೆಂಬಲ ನೀಡುತ್ತಿದ್ದ ಶಕ್ತಿಗಳ ವಿರುದ್ಧ ನಡೆದಿದ್ದ ‘ಆಪರೇಷನ್ ಸಿಂಧೂರ್’ ನಡೆದಿತ್ತು.

ದೇಶದ ಭದ್ರತೆಗೆ ಕಂಟಕವಾಗಿದ್ದ ಭಯೋತ್ಪಾದಕ ತಾಣಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸೇನೆಯು ರಾವಲ್ಪಿಂಡಿಯ ಉಗ್ರರ ಅಡಗು ತಾಣಗಳ ಮೇಲೆ ಮಿಂಚಿನ ಕಾರ್ಯಾಚರಣೆ ನಡೆಸಿತ್ತು. ಅತ್ಯಂತ ರಹಸ್ಯವಾಗಿ ರೂಪಿಸಲಾಗಿದ್ದ ಈ ಯೋಜನೆಯ ಸುಳಿವು ಪಾಕಿಸ್ತಾನಕ್ಕೆ ಕೊನೆಯವರೆಗೂ ಅರಿವಿಗೆ ಬಂದಿರಲಿಲ್ಲ.ಪಾಕಿಸ್ತಾನವು ಎಚ್ಚೆತ್ತುಕೊಳ್ಳುವ ಮುನ್ನವೇ  ದೇಶದ ಯೋಧರು ಕಾರ್ಯಾಚರಣೆ ಮುಗಿಸಿ ಹಿಂದಿರುಗಿದ್ದರು.

ಈ ವೀಡಿಯೊ ಬಿಡುಗಡೆ ಮಾಡುವ ಮೂಲಕ ಶತ್ರುಗಳಿಗೆ ಎಚ್ಚರಿಕೆಯ ಸಂದೇಶ ನೀಡಲಾಗಿದೆ. ಭಾರತದ ವಿರುದ್ಧ ಸಂಚು ರೂಪಿಸುವ ಅಥವಾ ಭಯೋತ್ಪಾದನೆಗೆ ಕುಮ್ಮಕ್ಕು ಶಕ್ತಿಗಳು ಜಗತ್ತಿನ ಯಾವುದೇ ಮೂಲೆಯಲ್ಲಿ ಅಡಗಿದ್ದರೂ ಸರಿ, ಭಾರತೀಯ ಸೇನೆ ಅವರನ್ನು ಹುಡುಕಿ ಶಿಕ್ಷಿಸುತ್ತದೆ ಎನ್ನುವುದು ಈ ವೀಡಿಯೊ ಸಾರಾಂಶವಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಈ ವೀಡಿಯೊಸಾಕಷ್ಟು ವೈರಲ್‌ ಆಗಿದ್ದು ಮೆಚ್ಚುಗೆಯ ಮಹಾಪೂರವೇ ಹರಿದುಬರುತ್ತಿದೆ. ದೇಶದ ಸೈನಿಕರ ಧೈರ್ಯ ಮತ್ತು ಶೌರ್ಯಕ್ಕೆ ನೆಟ್ಟಿಗರು ಸಲಾಂ ಎನ್ನುತ್ತಿದ್ದಾರೆ. ದೇಶದ ಗಡಿ ಸುರಕ್ಷಿತ ಕೈಗಳಲ್ಲಿದೆ ಎಂಬುದಕ್ಕೆ ಆಪರೇಷನ್ ಸಿಂಧೂರ್ ಸಾಕ್ಷಿ ಎಂದೂ ಹೇಳುತ್ತಿದ್ದಾರೆ.

 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.