2026-04-23 10:54:41

Opposition leader Ashok Kidi against CM government|ಸಿಎಂ ಸರ್ಕಾರ ವಿರುದ್ಧ ವಿಪಕ್ಷ ನಾಯಕ ಅಶೋಕ್ ಕಿಡಿ|Speed News Kannada

Opposition leader Ashok Kidi against CM government|ಸಿಎಂ ಸರ್ಕಾರ ವಿರುದ್ಧ ವಿಪಕ್ಷ ನಾಯಕ ಅಶೋಕ್ ಕಿಡಿ|Speed News Kannada

ರಾಜ್ಯ ರಾಜಕೀಯದಲ್ಲಿ ಮತ್ತೊಮ್ಮೆ ಅನುದಾನ ಮತ್ತು ಗ್ಯಾರಂಟಿ ಯೋಜನೆಗಳ ಕುರಿತು ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.ಆರ್‌.ಅಶೋಕ್‌, ಸಿಎಂ ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳ ಅನುದಾನವನ್ನು ಕಡಿತಗೊಳಿಸಿದ್ದು, ಎಸ್‌ಸಿ/ಎಸ್‌ಟಿ ನಿಧಿಯನ್ನು ಬೇರೆ ಉದ್ದೇಶಗಳಿಗೆ ತಿರುಗಿಸಿದೆ ಎಂದು ಆರೋಪಿಸಿದ್ದಾರೆ.


ಅಶೋಕ್ ಅವರ ಪ್ರಕಾರ, ಬಸವರಾಜ್‌ ಬೊಮ್ಮಯಿ ಆಡಳಿತದಲ್ಲಿ ಹಿಂದುಳಿದ ವರ್ಗಗಳಿಗೆ 1,699 ಕೋಟಿ ರೂ. ಅನುದಾನ ನೀಡಲಾಗಿತ್ತು. ಆದರೆ ಈಗ ಅದು 643 ಕೋಟಿಗೆ ಇಳಿಕೆಯಾಗಿದೆ ಎಂದು ಹೇಳಿದ್ದಾರೆ.ಸುಮಾರು 54,000 ಕೋಟಿ ರೂ. ಎಸ್‌ಸಿ/ಎಸ್‌ಟಿ ಅಭಿವೃದ್ಧಿ ನಿಧಿಯನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಲಾಗಿದೆ ಎಂದು ಆರೋಪಿಸಿ, “ದುರುಪಯೋಗ ಆಗಿಲ್ಲ ಎಂದು ಸಿಎಂ ಸಾರ್ವಜನಿಕವಾಗಿ ಹೇಳಲಿ” ಎಂದು ಸವಾಲು ಹಾಕಿದರು.


ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ತಿಂಗಳಿಗೆ 2,000 ರೂ. ನೀಡುವುದಾಗಿ ಘೋಷಿಸಿದ್ದರೂ, ವರ್ಷದಲ್ಲಿ ಕೇವಲ ಆರು ತಿಂಗಳು ಮಾತ್ರ ಹಣ ಜಮೆಯಾಗುತ್ತಿದೆ ಎಂದು ಟೀಕಿಸಿದರು.ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆ ಉಂಟಾಗಿದ್ದು, ಕಾಂಗ್ರೆಸ್ ಶಾಸಕರೇ ತಮ್ಮ ಕ್ಷೇತ್ರಗಳಿಗೆ ಅನುದಾನ ಸಿಗುತ್ತಿಲ್ಲ ಎಂದು ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.ಈ ಆರೋಪಗಳ ನಡುವೆಯೇ ಸರ್ಕಾರದಿಂದ ಸ್ಪಷ್ಟನೆ ಬರಬೇಕಿದ್ದು, ರಾಜ್ಯ ರಾಜಕೀಯದಲ್ಲಿ ಈ ವಿಷಯ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.