2026-03-07 01:55:17

Opposition Parties Protest Against India-US Trade Deal | ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಖಂಡಿಸಿ ವಿಪಕ್ಷಗಳ ಪ್ರತಿಭಟನೆ | Speed News Kannada

Opposition Parties Protest Against India-US Trade Deal | ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಖಂಡಿಸಿ ವಿಪಕ್ಷಗಳ ಪ್ರತಿಭಟನೆ | Speed News Kannada

ನವದೆಹಲಿ: ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದ ಸೇರದಂತೆ ಕೇಂದ್ರ ಸರ್ಕಾರದ ನೀತಿಗಳನ್ನು ಖಂಡಿಸಿ ವಿರೋಧ ಪಕ್ಷಳು ಇಂದು ಸಂಸತ್ ಭವನದ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಭಾರತ-ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ವಿರೋಧಿಸಿ, ವಿರೋಧ ಪಕ್ಷಗಳ ಸಂಸದರು, ಸಂಸತ್ ಭವನದ ಮಕರ ದ್ವಾರದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಭಾರತ-ಅಮೆರಿಕ ಒಪ್ಪಂದ ಒಂದು "ಟ್ರ್ಯಾಪ್ ಡೀಲ್" ಎಂದು ಲೇವಡಿ ಮಾಡಿದರು.
ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಿತು. 
ಕಾರ್ಮಿಕ ಮತ್ತು ರೈತ ವಿರೋಧಿ ನೀತಿಗಳನ್ನು ಖಂಡಿಸಿ ಕಾರ್ಮಿಕ ಸಂಘಟನೆಗಳು ಹಮ್ಮಿಕೊಂಡಿರುವ ಭಾರತ್‌ ಬಂದ್‌ ಗೂ ವಿಪಕ್ಷಗಳು ಬೆಂಬಲ ಘೋಷಿಸಿದವು.
ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ, ರೈತ ವಿರೋಧಿ ಮತ್ತು ದೇಶವಿರೋಧಿ ನೀತಿಗಳನ್ನು ಖಂಡಿಸಿ ಹಾಗೂ 4 ಹೊಸ ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ಇಂದು ದೇಶವ್ಯಾಪಿ ಮುಷ್ಕರಕ್ಕೆಕರೆ ನೀಡಿವೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.