ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಿತ್ತಲೆ ಹಣ್ಣು ತುಂಬಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 48 ರ ನೆಲಮಂಗಲದ ಕೆಂಗಲ್ ಗ್ರಾಮದ ಬಳಿ ಸಂಭವಿಸಿದೆ.
ಲಾರಿ ಪಲ್ಟಿಯಾಗಿದ್ದರಿಂದ ಕಿತ್ತಲೆ ಹಣ್ಣುಗಳು ರಸ್ತೆಯ ಮೇಲೆ ಚೆಲ್ಲಿದ್ದರಿಂದ, ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲವು ಗಂಟೆ ಕಾಲ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿತ್ತು. ಇದರಿಂದ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ವಾಹನಗಳು ಮಂದಗತಿಯಲ್ಲಿ ಸಾಗುತ್ತಿದ್ದವು. ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು.
ಲಾರಿ ಚಾಲಕನು ವಾಹನದ ನಿಯಂತ್ರಣ ಕಳೆದುಕೊಂಡ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.