2026-03-07 05:17:03

OTT Plays A Significant Role In Portraying Issues And Lifestyles | ಸಮಸ್ಯೆ ಮತ್ತು ಜೀವನಶೈಲಿ ಚಿತ್ರಿಸುವಲ್ಲಿ ಓಟಿಟಿ ಮಹತ್ವದ ಪಾತ್ರ | Speed News Kannada

OTT Plays A Significant Role In Portraying Issues And Lifestyles | ಸಮಸ್ಯೆ ಮತ್ತು ಜೀವನಶೈಲಿ ಚಿತ್ರಿಸುವಲ್ಲಿ ಓಟಿಟಿ ಮಹತ್ವದ ಪಾತ್ರ | Speed News Kannada

ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸದಲ್ಲಿ ಗಿರೀಶ್‌ ಕಾಸರವಳ್ಳಿ ಅಭಿಪ್ರಾಯ

ಓಟಿಟಿಗಳು ನಮ್ಮ ಜೀವನಕ್ಕೆ ಹತ್ತಿರವಾಗಿರುವ ಸಮಸ್ಯೆಗಳು ಮತ್ತು ಜೀವನಶೈಲಿಯನ್ನು ಚಿತ್ರಿಸುತ್ತಿವೆ. ಆ ಅರ್ಥದಲ್ಲಿ ಅವು ಬಹಳ ಪ್ರಮುಖ ಪಾತ್ರ ವಹಿಸುತ್ತಿವೆ ಎಂದು ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್‌ ಕಾಸರವಳ್ಳಿ ಅಭಿಪ್ರಾಯಪಟ್ಟಿದ್ದಾರೆ.

೧೭ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸದ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದ ಅವರು, ʼ30 ವರ್ಷಗಳ ಹಿಂದೆ ಟೆಲಿವಿಷನ್ ಬೆಳವಣಿಗೆಯಿಂದ ಉಂಟಾದ ಒಳ್ಳೆಯ ಸಂಗತಿಯೆಂದರೆ, ಚಾಲ್ತಿಯಲ್ಲಿದ್ದ ಕೆಲವು ನಂಬಿಕೆಗಳನ್ನು ಪುಡಿ ಮಾಡಿದ್ದು. ಅದಕ್ಕೂ ಮೊದಲು ಒಬ್ಬ ನಟಿ ಸ್ಟಾರ್‌ ಆಗಬೇಕಾದರೆ ಆಕೆ ಎಷ್ಟೇ ಪ್ರತಿಭಾವಂತಳಾಗಿದ್ದರೂ, ಸುಂದರವಾಗಿರಬೇಕು ಎಂಬ ನಂಬಿಕೆ ಇತ್ತು. ಪ್ರತಿಭೆ ಎರಡನೇ ಸ್ಥಾನದಲ್ಲಿತ್ತು. ಅಂದರೆ ಕಲಾವಿದರನ್ನು ಅರ್ಥಮಾಡಿಕೊಳ್ಳಲು ಮಾರುಕಟ್ಟೆ ಆರ್ಥಿಕತೆಯ ತರ್ಕವನ್ನು ಬಳಸಲಾಗುತ್ತಿತ್ತು. ಆದರೆ, ಟಿವಿ ಬಂದ ನಂತರ ಪ್ರತಿಭೆ ಇರುವವರನ್ನು ನೇರವಾಗಿ ಸಾಮಾನ್ಯ ಜನರ ಮಧ್ಯದಿಂದಲೇ ಆಯ್ಕೆ ಮಾಡಲು ಆರಂಭಿಸಲಾಯಿತು. ಅವರು ಸುಂದರವಾಗಿ ಕಾಣಿಸಿಕೊಳ್ಳದೇ ಇರಬಹುದು, ಆದರೆ ಪ್ರತಿಭಾವಂತರಾಗಿದ್ದರು. 

ಇದಕ್ಕೆ ಅತ್ಯುತ್ತಮ ಉದಾಹರಣೆ ಎಂದರೆ ಅದು ನಟಿ ಅನಿತಾ ಕನ್ವರ್‌ ಎಂದ ಕಾಸರವಳ್ಳಿ, ʼಅವರು ಒಂದು ಧಾರಾವಾಹಿಯನ್ನು ಸುಮಾರು ಎರಡು ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಸಿದರು. ಆದರೆ, ಸಿನಿಮಾರಂಗ ಅವರನ್ನು ಅಷ್ಟರ ಮಟ್ಟಿಗೆ ಸ್ವೀಕರಿಸಲಿಲ್ಲ. ಈ ರೀತಿಯ ಹಲವಾರು ಸೂಕ್ಷ್ಮ ಬದಲಾವಣೆಗಳು ಮತ್ತು ಹೊಸ ಅಸಮಾಧಾನಗಳು ಈಗ ನಡೆಯುತ್ತಿವೆ. ನನ್ನ ಅಭಿಪ್ರಾಯದಲ್ಲಿ ವೆಬ್ ಸೀರೀಸ್‌ಗಳು ಇದನ್ನು ಬಹಳ ಪರಿಣಾಮಕಾರಿಯಾಗಿ ಮಾಡುತ್ತಿವೆ. ಆ ನಿಟ್ಟಿನಲ್ಲಿ ನಾವು ಓಟಿಟಿಯೊಂದಿಗೆ ಹೆಜ್ಜೆ ಹಾಕಬೇಕುʼ ಎಂದು ಹೇಳಿದರು.

ಪ್ರತಿ ೨೦ ವರ್ಷಗಳಿಗೊಮ್ಮೆ ಸಿನಿಮಾದ ವ್ಯಾಕರಣ ಬದಲಾಗುತ್ತದೆ ಎಂದ ಅವರು, ʼಸಿನೆಮಾ ಒಂದು ಕಲೆ. ಅದು ಸುಮಾರು 130 ವರ್ಷಗಳಷ್ಟು ಹಳೆಯದು. ಆದರೆ, ಪ್ರತಿ 20 ವರ್ಷಕ್ಕೊಮ್ಮೆ ಚಲನಚಿತ್ರ ವ್ಯಾಕರಣದ ದೃಷ್ಟಿಕೋನ ಬದಲಾಗುತ್ತಿರುತ್ತದೆ. ಇಲ್ಲಿಯವರೆಗೂ ಕೆಲವು ಬಾರಿ ಈ ತರಹದ ಬದಲಾವಣೆಗಳಾಗುತ್ತಿರುತ್ತವೆ. ಆ ಬದಲಾವಣೆಯ ಹಿಂದೆ ರಾಜಕೀಯವಿದೆ. ಆ ಬದಲಾವಣೆಯ ಹಿಂದೆ ಒಂದು ಹೊಸ ಅಭಿವ್ಯಕ್ತಿ ವಿಧಾನ ಮೂಡಿಬರುತ್ತದೆʼ ಎಂದು ಹೇಳಿದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.