2026-03-07 07:10:18

Overturned truck the injured driver | ಉರುಳಿದ ಟ್ರಕ್ ಗಾಯಗೊಂಡ ಚಾಲಕನ್ನು ಬಿಟ್ಟು ಕಲ್ಲಂಗಡಿಗೆ ಮುಗಿಬಿದ್ದ ಜನ | Speed News Kannada

Overturned truck the injured driver | ಉರುಳಿದ ಟ್ರಕ್ ಗಾಯಗೊಂಡ ಚಾಲಕನ್ನು ಬಿಟ್ಟು ಕಲ್ಲಂಗಡಿಗೆ ಮುಗಿಬಿದ್ದ ಜನ | Speed News Kannada

ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರದಲ್ಲಿ ಕ್ಯಾಂಟರ್ ವಾಹನ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಅವಘಡ ನಡೆದಿದೆ.
ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರದ ಕ್ಯಾಂಟರ್ ಚಾಲಕ ಪಾರಾಗಿದ್ದಾನೆ.ದೊಡ್ಡಬಳ್ಳಾಪುರದ ಮೇಷ್ಟ್ರು ಮನೆ ಸರ್ಕಲ್ ಬಳಿ ಘಟನೆ ನಡೆದಿದೆ. ವೇದಮೂರ್ತಿ (22) ಗಾಯಗೊಂಡ ಚಾಲಕ ಎಂದು ಗುರುತಿಸಲಾಗಿದೆ.ಚೆನ್ನೈನಿಂದ ದಾವಣಗೆರೆಗೆ ಕಲ್ಲಂಗಡಿ ತುಂಬಿಕೊಂಡು ಹೋಗುತ್ತಿದ್ದ ಕ್ಯಾಂಟರ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಮೂರು ಡಿವೈಡರ್ ದಾಟಿ ಹಳ್ಳಕ್ಕೆ ಬಂದು ಕ್ಯಾಂಟರ್ ಬಿದ್ದಿದೆ.ಗಾಯಾಳು ಡ್ರೈವರ್ ಅನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಅಪಘಾತದ ರಭಸಕ್ಕೆ ಕಲ್ಲಂಗಡಿ ಹಣ್ಣುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಹಣ್ಣನ್ನು ಎತ್ತಿಕೊಳ್ಳಲು ಜನರು ಮುಗಿಬಿದ್ದಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.