2026-03-07 05:14:22

Owaisi urges PM Modi to stop war | ಈ ಕಾರಣಕ್ಕೆ ಯುದ್ಧ ನಿಲ್ಲಿಸಲು ಪ್ರಧಾನಿ ಮೋದಿಗೆ ಓವೈಸಿ ಆಗ್ರಹ | Speed News Kannada

Owaisi urges PM Modi to stop war | ಈ ಕಾರಣಕ್ಕೆ ಯುದ್ಧ ನಿಲ್ಲಿಸಲು ಪ್ರಧಾನಿ ಮೋದಿಗೆ ಓವೈಸಿ ಆಗ್ರಹ | Speed News Kannada

ಹೈದರಾಬಾದ್: ಅಮೆರಿಕ, ಇಸ್ರೇಲ್‌ ಮತ್ತು ಇರಾನ್‌ ನಡುವಿನ ಯುದ್ದವನ್ನು ಕೊನೆಗಾಣಿಸಲು ಪ್ರಧಾನಿ ನರೆಂದ್ರ ಮೋದಿ ಅವರು ಮುಂದಾಗಬೇಕು ಎಂದು ಎಐಎಂಐಎಂ ಅಧ್ಯಕ್ಷ ಸಂಸದ ಅಸಾದುದ್ದೀನ್‌ ಓವೈಸಿ ಆಗ್ರಹಪಡಿಸಿದ್ದಾರೆ. ಹೈದರಾಬಾದ್‌ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ಸೇನಾ ದಾಳಿಯನ್ನು ಖಂಡಿಸಿದರು.
ಖಮೇನಿ ಅವರನ್ನು ಹತ್ಯೆ ಮಾಡಿರುವುದು ಅನೈತಿಕ ಮತ್ತು ಕಾನೂನುಬಾಹಿರ ಎಂದು ಅವರು ಬಣ್ಣಿಸಿ, ಮದ್ಯಪ್ರಾಚ್ಯ ದೇಶಗಳಲ್ಲಿ ಸುಮಾರು 10 ಮಿನಿಯನ್‌ ಭಾರತೀಯರು ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಭಾರತ ಸರ್ಕಾರ ಮತ್ತು ಪ್ರಧಾನಿ ಮೋದಿ ಈ ಯುದ್ಧವನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.
ಯುದ್ಧ ಕೊನೆಗೊಳ್ಳಲೇಬೇಕು. ಏಕೆಂದರೆ ಯುದ್ಧ ಹೆಚ್ಚಾದಷ್ಟೂ ಭಾರಿ ಪ್ರಕ್ಷುಬ್ಧತೆ, ಅನಿಶ್ಚಿತತೆ ಮತ್ತು ಅಸ್ಥಿರತೆ ಉಂಟಾಗುತ್ತದೆ. ಪವಿತ್ರ ರಂಜಾನ್ ಮಾಸದಲ್ಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಬೆಂಜಮಿನ್ ನೆತನ್ಯಾಹು ಜಂಟಿಯಾಗಿ ಇರಾನ್ ಮೇಲೆ ದಾಳಿ ಮಾಡಿದ್ದಾರುವುದು ಖಂಡನೀಯ. ಖಮೇನಿ ಶಿಯಾ ಸಮುದಾಯದ ಗೌರವಾನ್ವಿತ ನಾಯಕ. 86 ವರ್ಷದ ಖಮೇನಿ ಹತ್ಯೆ ಮಾಡಿರುವುದು ಹೇಡಿಗಳ ಕೃತ್ಯ ಎಂದರು.  ತೈಲ ಬೆಲೆಯಲ್ಲಿ ಒಂದು ಡಾಲರ್ ಹೆಚ್ಚಳವಾದರೂ ಭಾರತದ ಆರ್ಥಿಕತೆಯ ಮೇಲೆ ಭಾರಿ ಪರಿಣಾಮ ಬೀರುತ್ತದೆ ಎಂದೂ ಓವೈಸಿ ಎಚ್ಚರಿಸಿದು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.