2026-03-17 01:26:20

Pakistan files complaint against Bangladesh after defeat | ಸೋತ ಬಳಿಕ ಬಾಂಗ್ಲಾದೇಶ್ ವಿರುದ್ಧ ದೂರು ದಾಖಲಿಸಿದ ಪಾಕಿಸ್ತಾನ್ | Speed News Kannada

Pakistan files complaint against Bangladesh after defeat | ಸೋತ ಬಳಿಕ ಬಾಂಗ್ಲಾದೇಶ್ ವಿರುದ್ಧ ದೂರು ದಾಖಲಿಸಿದ ಪಾಕಿಸ್ತಾನ್ | Speed News Kannada

ಬಾಂಗ್ಲಾದೇಶ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಪಾಕಿಸ್ತಾನ್ ತಂಡ 1-2 ಅಂತರದಿಂದ ಸೋತಿದೆ. ಈ ಹೀನಾಯ ಸೋಲಿನ ಬೆನ್ನಲ್ಲೇ ಪಾಕ್ ತಂಡವು ಮ್ಯಾಚ್ ರೆಫರಿ ನೀಯಮೂರ್ ರಶೀದ್ ಅವರಿಗೆ ಅಧಿಕೃತ ದೂರು ನೀಡಿದ್ದಾರೆ. ಈ ದೂರಿನಲ್ಲಿ ಬಾಂಗ್ಲಾದೇಶ್ ತಂಡವು ರಿವ್ಯೂ ತೆಗೆದುಕೊಳ್ಳಲು ಈ ಮಿತಿಗಿಂತ ಹೆಚ್ಚು ಸಮಯ ತೆಗೆದುಕೊಂಡಿದೆ ಎಂದು ಆರೋಪಿಸಲಾಗಿದೆ. ಮಾರ್ಚ್ 15, 2026 ರಂದು ಢಾಕಾದಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ ಪಂದ್ಯದ ಕೊನೆಯ ಓವರ್‌ನಲ್ಲಿ ಪಾಕಿಸ್ತಾನಕ್ಕೆ ಗೆಲ್ಲಲು 2 ಎಸೆತಗಳಲ್ಲಿ 12 ರನ್‌ಗಳ ಅಗತ್ಯವಿತ್ತು. ಈ ವೇಳೆ ಬೌಲ‌ರ್ ರಿಶಾದ್ ಹೊಸೈನ್ ಎಸೆದ 5ನೇ ಎಸೆತವನ್ನು ಅಂಪೈ‌ರ್ ಕುಮಾರ್ ಧರ್ಮಸೇನ 'ವೈಡ್' ಎಂದು ಘೋಷಿಸಿದ್ದರು.
ಇತ್ತ ಅಂಪೈರ್ ವೈಡ್ ಎಂದು ಘೋಷಿಸಿದರೂ ಬಾಂಗ್ಲಾದೇಶ್ ತಂಡವು ಎಲ್‌ ಬಿಡಬ್ಲ್ಯೂ (LBW) ಗಾಗಿ ರಿವ್ಯೂ (DRS) ತೆಗೆದುಕೊಂಡಿತು. ಈ ವೇಳೆ ಚೆಂಡು ಪ್ಯಾಡ್‌ ಗೆ ತಗುಲಿರುವುದು ಕಂಡು ಬಂದಿದೆ. ಇದಾಗ್ಯೂ ಶಾಹೀನ್ ಶಾ ಅಫ್ರಿದಿ ಎಲ್‌ಬಿಡಬ್ಲ್ಯೂ ಆಗಿರಲಿಲ್ಲ. ಹೀಗಾಗಿ ವೈಡ್ ಅನ್ನು ಹಿಂಪಡೆದು ಫೀಲ್ಡ್ ಅಂಪೈರ್ ನಾಟೌಟ್ ಎಂದು ತೀರ್ಪು ನೀಡಿದ್ದರು. ಆದರೆ ಇದೀಗ ಈ ರಿವ್ಯೂ ತೆಗೆದುಕೊಳ್ಳಲು ಬಾಂಗ್ಲಾದೇಶ್ ತಂಡದ ನಾಯಕ ಹೆಚ್ಚಿನ ಸಮಯ ತೆಗೆದುಕೊಂಡಿದ್ದಾರೆ ಎಂದು ಪಾಕಿಸ್ತಾನ್ ಆರೋಪಿಸಿದೆ. ಐಸಿಸಿ ನಿಯಮದ ಪ್ರಕಾರ ರಿವ್ಯೂ ಕೇಳಲು ಕೇವಲ 15 ಸೆಕೆಂಡುಗಳ ಕಾಲಾವಕಾಶವಿರುತ್ತದೆ. ಆದರೆ ಬಾಂಗ್ಲಾದೇಶ್ ಈ ಮಿತಿಗಿಂತ ಹೆಚ್ಚು ಸಮಯ ತೆಗೆದುಕೊಂಡಿದೆ.
ಕ್ರೀಡಾಂಗಣದ ಬಿಗ್ ಸ್ಕಿನ್ ಮೇಲೆ ರಿಪ್ಲೇ ನೋಡಿದ ನಂತರವೇ ಬಾಂಗ್ಲಾದೇಶ್ ತಂಡದ ನಾಯಕ ಮೆಹದಿ ಹಸನ್ ಮಿರಾಝ್ ರಿವ್ಯೂ ನಿರ್ಧಾರ ಮಾಡಿದ್ದಾರೆ. ಇದು ನಿಯಮಬಾಹಿರ ಎಂದು ಪಾಕಿಸ್ತಾನ ಆರೋಪಿಸಿದೆ. ಅಲ್ಲದೆ ಈ ಬಗ್ಗೆ ಮ್ಯಾಚ್ ರೆಫರಿ ನೀಯಮೂರ್ ರಶೀದ್ ಅವರಿಗೆ ಅಧಿಕೃತ ದೂರು ನೀಡಿ ಬಾಂಗ್ಲಾದೇಶ್ ತಂಡದ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಾಕಿಸ್ತಾನ್ ತಂಡ ಆಗ್ರಹಿಸಿದೆ. ಇನ್ನು ಈ ಪಂದ್ಯದ ಕೊನೆಯ ಎರಡು ಎಸೆತಗಳಲ್ಲಿ 12 ಗುರಿ ಪಡೆದಿದ್ದ ಪಾಕಿಸ್ತಾನ್ ತಂಡಕ್ಕೆ ಯಾವುದೇ ರನ್ ಕಲೆಹಾಕಲು ಸಾಧ್ಯವಾಗಿರಲಿಲ್ಲ. ಅಂತಿಮವಾಗಿ ಬಾಂಗ್ಲಾದೇಶ್ ತಂಡವು 11 ರನ್‌ಗಳ ಜಯ ಸಾಧಿಸಿ ಮೂರು ಪಂದ್ಯಗಳ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.