2026-06-08 04:04:52

Pakistani player fined for inappropriate behavior | ಹೋಟೆಲ್‌ ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ ಪಾಕ್ ಆಟಗಾರನಿಗೆ ದಂಡ | Speed News Kannada

Pakistani player fined for inappropriate behavior | ಹೋಟೆಲ್‌ ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ ಪಾಕ್ ಆಟಗಾರನಿಗೆ ದಂಡ | Speed News Kannada

ಕ್ಯಾಂಡಿ: ಪಾಕಿಸ್ತಾನ ತಂಡದ ಆಟಗಾರರೊಬ್ಬರು, ಶ್ರೀಲಂಕಾದ ಹೋಟೆಲ್‌ನ ಮಹಿಳಾ ಸಿಬ್ಬಂದಿ ಜೊತೆ ಅನುಚಿತವಾಗಿ ನಡೆದುಕೊಂಡಿರುವ ಪ್ರಕರಣ ವರದಿಯಾಗಿದೆ. ಐಸಿಸಿ ಟಿ20 ವಿಶ್ವಕಪ್ 2026ರ ಸೂಪರ್–8 ತಮ್ಮ ಕೊನೆಯ ಪಂದ್ಯಾವಳಿಗೂ ಮುನ್ನ ಈ ಘಟನೆ ನಡೆದಿದೆ.
ಗೋಲ್ಡನ್ ಕ್ರೌನ್ ಹೋಟೆಲ್‌ನ ಮಹಿಳಾ ಸಿಬ್ಬದ್ದಿ ಜೊತೆ ಅನುಚಿತವಾಗಿ ವರ್ತನೆ ತೋರಿದ್ದಕ್ಕಾಗಿ ಆಟಗಾರ ಹಾಗೂ ತಂಡದ ವ್ಯವಸ್ಥಾಪಕರಿಗೆ ದಂಡ ವಿಧಿಸಲಾಗಿದೆ ಎಂದು ತಿಳಿದುಬಂದಿದೆ.
ಆತಿಥೇಯ ಶ್ರೀಲಂಕಾ ವಿರುದ್ಧದ ಸೂಪರ್–8ರ ಹಂತದ ತನ್ನ ಕೊನೆಯ ಪಂದ್ಯಕ್ಕೂ ಮುನ್ನ ಈ ಘಟನೆ ನಡೆದಿದ್ದು, ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮತ್ತು ತಂಡದ ವಲಯದಲ್ಲಿ ಈ ಬಗ್ಗೆ ಚರ್ಚೆಯಾಗುತ್ತಿರುವುದಾಗಿ ಟೆಲಿಕಾಂ ಏಷ್ಯಾ ಸ್ಪೋರ್ಟ್ ವರದಿ ಮಾಡಿದೆ.
ಸೂಪರ್–8ರ ಹಂತದ ತನ್ನ ಕೊನೆಯ ಪಂದ್ಯಕ್ಕೂ ಮುನ್ನ, ಪಾಕಿಸ್ತಾನ ತಂಡದ ಆಟಗಾರನೊಬ್ಬ ಮಹಿಳಾ ಹೌಸ್‌ಕೀಪಿಂಗ್ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಆಗ ಈ ಮಹಿಳಾ ಸಿಬ್ಬಂದಿ ಸಹಾಯಕ್ಕಾಗಿ ಕರೆ ಮಾಡಿದ್ದಾರೆ. ಕೂಡಲೇ ಹೋಟೆಲ್ ಸಿಬ್ಬಂದಿ ಆಕೆಯನ್ನು ರಕ್ಷಿಸಿದ್ದಾರೆ. 
ನಂತರ ತಂಡದ ವ್ಯವಸ್ಥಾಪಕ ನವೈದ್ ಚೀಮಾ ಅವರಿಗೆ ಈ ಘಟನೆಯನ್ನು ತಿಳಿಸಲಾಗಿದೆ. ಆಟಗಾರರು ತಂಗಿದ್ದ ಗೋಲ್ಡನ್ ಕ್ರೌನ್ ಹೋಟೆಲ್‌ನ ಆಡಳಿತ ಮಂಡಳಿಯು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಲು ಬಯಸಿತ್ತು. ಆದರೆ, ಚೀಮಾ ಅವರು ಅನುಚಿತವಾಗಿ ವರ್ತಿಸಿದ ಆಟಗಾರನ ಪರವಾಗಿ ಕ್ಷಮೆಯಾಚಿಸಿದ್ದರಿಂದ ಮತ್ತು ಆಟಗಾರನಿಗೆ ದಂಡ ವಿಧಿಸಿದ್ದರಿಂದ ಅಲ್ಲಿಗೆ ಕೈಬಿಟ್ಟಿದೆ.
ಅನುಚಿತವಾಗಿ ವರ್ತಿಸಿದ ಪಾಕಿಸ್ತಾನ ತಂಡದ ಆಟಗಾರ, ಪಾಕ್ ಕ್ರಿಕೆಟ್ ಮಂಡಳಿಯ (ಪಿಸಿಬಿ) ಶಿಸ್ತು ಸಮಿತಿಯ ಮುಂದೆ ಹಾಜರಾಗುವ ಸಾಧ್ಯತೆ ಇದ್ದು, ಮತ್ತಷ್ಟು ಕಠಿಣ ಶಿಕ್ಷೆ ವಿಧಿಸುವ ಸಾಧ್ಯತೆಗಳಿವೆ.
ಸೂಪರ್–8ರ ಹಂತದ ತನ್ನ ಕೊನೆಯ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಪಾಕಿಸ್ತಾನ ತಂಡವು 5 ರನ್‌ಗಳ ಅಂತರದಲ್ಲಿ ಗೆಲುವು ಸಾಧಿಸಿತ್ತು. ಆದರೆ, ರನ್‌ರೇಟ್ ಆಧಾರದಲ್ಲಿ ಪಾಕಿಸ್ತಾನ ತಂಡವು ಸೆಮಿಫೈನಲ್ ತಲುಪದೆ ಹೊರಬಿದ್ದಿದೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.